ಗ್ರಾಮೀಣ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ

Bhumi Puja for construction of rural police station building
ಇಳಕಲ್ಲ ಗ್ರಾಮೀಣ ಪೋಲಿಸ್ ಠಾಣೆ ಕಟ್ಟಡ ನಿರ್ಮಾಣಕ್ಕೆ ಶಾಸಕ ವಿಜಯಾನಂದ ಕಾಶಪ್ಪನವರ ಭೂಮಿಪೂಜೆ ನೆರವೇರಿಸಿದರು. ಹೆಚ್ಚುವರಿ ಎಸ್‌ಪಿ ಮಹಾಂತೇಶ್ವರ ಜಿದ್ದಿ , ಡಿಎಸ್‌ಪಿ ವಿಶ್ವನಾಥರಾವ್ ಕುಲಕರ್ಣಿ, ಸಿಪಿಐ ಸುನೀಲ ಸವದಿ ಮತ್ತಿತರರಿದ್
Published on

ಇಳಕಲ್ಲ(ಗ್ರಾ): ಗ್ರಾಮೀಣ ಪೊಲೀಸ್ ಠಾಣೆ ಕಾರ್ಯಾಲಯ ಮೇಲಂತಸ್ತಿನಲ್ಲಿ ಇರುವುದರಿಂದ ವೃದ್ಧರು ಅಲ್ಲಿಗೆ ಭೇಟಿ ನೀಡಲು ತೊಂದರೆಯಾಗುತ್ತಿದ್ದು, ಅದನ್ನು ತಪ್ಪಿಸಲು ಹೊಸ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.

ಪಟ್ಟಣದಲ್ಲಿ ಭಾನುವಾರ ಆಯೋಜಿಸಿದ್ದ ಗ್ರಾಮೀಣ ಪೊಲೀಸ್ ಠಾಣೆ ಕಟ್ಟಡ ಕಾಮಗಾರಿಯ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಕಾಮಗಾರಿಯನ್ನು ಹಾವೇರಿಯ ಗುತ್ತಿಗೆದಾರರಿಗೆ ವಹಿಸಲಾಗಿದೆ. ಗುಣಮಟ್ಟದ ಕಾಮಗಾರಿಗೆ ಸೂಚಿಸಲಾಗಿದ್ದು, 9 ತಿಂಗಳಲ್ಲಿ ಪೂರ್ಣಗೊಳಿಸುವುದಾಗಿ ತಿಳಿಸಿದ್ದಾರೆ ಎಂದರು.

ಪಟ್ಟಣದಲ್ಲಿ ನಿರ್ಮಿಸಲಾಗುತ್ತಿರುವ ಇಂದಿರಾ ಕ್ಯಾಂಟೀನ್ ಕಾಮಗಾರಿಯನ್ನು ತಕ್ಷಣ ಪೂರ್ಣಗೊಳಿಸಬೇಕು ಎಂದರು.

ನಗರಸಭೆ ಅಧ್ಯಕ್ಷೆ ಸುಧಾರಾಣಿ ಸಂಗಮ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ರಾಘು ಚಿಂಚಮಿ, ಹೆಚ್ಚುವರಿ ಎಸ್‌ಪಿ ಮಹಾಂತೇಶ್ವರ ಜಿದ್ದಿ , ಡಿಎಸ್‌ಪಿ ವಿಶ್ವನಾಥರಾವ್ ಕುಲಕರ್ಣಿ, ಸಿಪಿಐ ಸುನೀಲ ಸವದಿ, ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ ಮಲ್ಲಿಕಾರ್ಜುನ ಸತ್ತಿಗೌಡರ, ಶಹರ್ ಪೊಲೀಸ್ ಠಾಣೆಯ ಪಿಎಸ್‌ಐ ಎಸ್.ಆರ್.ನಾಯಕ ಕಾಂಗ್ರೆಸ್ ಮುಖಂಡರಾದ ಶರಣಪ್ಪ ಆಮದಿಹಾಳ,ಅಬ್ದುಲರಜಾಕ ತಟಗಾರ, ಶಬ್ಬೀರ ಬಾಗವಾನ, ಮಲ್ಲು ಮಡಿವಾಳರ, ಹನುಮಂತ ತುಂಬದ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net