ಹೊಸಕೋಟೆ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ

sarath
ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ
Published on

ವಿಜಯವಾಣಿ ಸುದ್ದಿಜಾಲ ಹೊಸಕೋಟೆ
ನಗರದ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಿ, ಮೂಲ ಸೌಕರ್ಯಗಳನ್ನು ಒದಗಿಸಿ ಮಾದರಿ ನಗರ ಮಾಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.
ನಗರಸಭೆ ವ್ಯಾಪ್ತಿಯ 5ನೇ ವಾರ್ಡ್‌ನ ಕೆಳಗಿನ ಪೇಟೆಯ ದೊಡ್ಡನಾಲದಲ್ಲಿ ಸೋಮವಾರ 1 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಹಾಗೂ 1ನೇ ವಾರ್ಡ್‌ನ ಸ್ವಾಮಿ ವಿವೇಕಾನಂದ ನಗರದ ಮುಖ್ಯರಸ್ತೆಯಲ್ಲಿನ 80 ಲಕ್ಷ ರೂ.ವೆಚ್ಚದ ಚರಂಡಿ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ನಗರಸಭೆ ವ್ಯಾಪ್ತಿಯಲ್ಲಿ ನಡೆಯುವ ಎಲ್ಲ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಗುತ್ತಿಗೆದಾರರು ಗುಣ ಮಟ್ಟಕ್ಕೆ ಆದ್ಯತೆ ನೀಡಬೇಕು. ಕಾಂಕ್ರೀಟ್ ರಸ್ತೆ, ಡಾಂಬರು ರಸ್ತೆ, ಪೈಪ್‌ಲೈನ್ ನಿರ್ಮಾಣ ಕಾಮಗಾರಿ, ಚರಂಡಿ ಇತರೆ ಎಲ್ಲ ಕೆಲಸಗಳು ಗುಣಮಟ್ಟದಿಂದ ಇರಬೇಕು. ಗುಣಮಟ್ಟದಲ್ಲಿ ಯಾವುದೇ ರಾಜಿ ಆಗುವುದಿಲ್ಲ ಎಂದರು.
ಮುಖಂಡರಾದ ಬಿ.ವಿ.ಭೈರೇಗೌಡ , ಉಪ್ಪಾರಹಳ್ಳಿ ಸಿ.ಮುನಿಯಪ್ಪ, ಕೃಷ್ಣಮೂರ್ತಿ, ರಾಕೇಶ್, ಗೋಪಿ, ಆರ್.ಟಿ.ಸಿ.ಗೋವಿಂದ್‌ರಾಜ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net