

ಕೆ.ಎಂ.ದೊಡ್ಡಿ: ಮದ್ದೂರು ಕ್ಷೇತ್ರದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ತಾಲೂಕಿನ ಅಭಿವೃದ್ಧಿ ಶ್ರಮಿಸಲಾಗುವುದು ಎಂದು ಶಾಸಕ ಕದಲೂರು ಉದಯ್ ತಿಳಿಸಿದರು.
ಸಮೀಪದ ಮೆಣಸಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಡೇನಹಳ್ಳಿ ಗ್ರಾಮದ ಪರಿಶಿಷ್ಟ ಕಾಲನಿಯಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಸುಮಾರು 30 ಲಕ್ಷ ರೂ. ವೆಚ್ಚದಲ್ಲಿ ಸಿ.ಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗೆ ಸದ್ಬಳಕೆ ಮಾಡುವುದಾಗಿ ಭರವಸೆ ನೀಡಿದರು.
ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮುಂದಿನ ಬಜೆಟ್‌ನಲ್ಲಿ ವಿಶೇಷವಾಗಿ ಪರಿಶಿಷ್ಟ ಜಾತಿ /ಪಂಗಡಗಳ ಅಭಿವೃದ್ಧಿಗಾಗಿ ವಿಶೇಷ ಯೋಜನೆಗಳನ್ನು ಘೋಷಿಸುವ ನಿರೀಕ್ಷೆಗಳಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಭಾರತಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣೂರು ರಾಜೀವ್, ಲೋಕೋಪಯೋಗಿ ಇಲಾಖೆ ಎಇಇ ದೇವಾನಂದ್, ಮುಖಂಡರಾದ ಹರೀಶ್ ಪಾಪಣ್ಣ, ಸಿದ್ದಲಿಂಗಸ್ವಾಮಿ, ಒಡೆಯರ್, ಸಂತೋಷ್, ಶ್ರೀಕಂಠೇಗೌಡ, ಆನಂದ್, ಸ್ವಾಮಿ, ಪುಟ್ಟಸ್ವಾಮಿ, ಚಿಕ್ಕಹೈದಯ್ಯ, ಸಿದ್ದಯ್ಯ, ಮಹೇಶ್ ಸುರೇಶ್, ವೀರೇಂದ್ರ ಉಪಸ್ಥಿತರಿದ್ದರು.