ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ

20.npk-1
ಕಕ್ಕಬೆ ಗ್ರಾಮ ಪಂಚಾಯಿತಿಯ ಕುಂಜಿಲ ಪೈನರಿ ಮಸೀದಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎ.ಎಸ್ ಪೊನ್ನಣ್ಣ ಭೂಮಿಪೂಜೆ ನೆರವೇರಿಸಿದರು. ಸೌಕತ್ ಆಲಿ, ಇಬ್ರಾಹಿಂ, ಕಲಿಯಂಡ ಸಂಪನ್ ಅಯ್ಯಪ್ಪ ಇದ್ದರು.
Published on

ನಾಪೋಕ್ಲು: ಸಮೀಪದ ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಜಿಲ ಪೈನರಿ ಮಸೀದಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿ ಕಾನೂನು ಸಲಹೆಗಾರ, ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಶನಿವಾರ ಭೂಮಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿ, ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮಸ್ಥರು ರಸ್ತೆ ಅಭಿವೃದ್ಧಿಗೆ ಬೇಡಿಕೆ ಇಟ್ಟಿದ್ದರು. ಇದೀಗ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಗ್ರಾಮಸ್ಥರ ಸಹಕಾರ ಮುಖ್ಯ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್ ಕುಂಜಿಲ ಪೈನರಿ ಜಮಾಯತ್ ಅಧ್ಯಕ್ಷ ಸೌಕತ್ ಆಲಿ, ಉಪಾಧ್ಯಕ್ಷ ಇಬ್ರಾಹಿಂ, ಪಂಚಾಯತಿ ಮಾಜಿ ಅಧ್ಯಕ್ಷ ಕಲಿಯಂಡ ಸಂಪನ್ ಅಯ್ಯಪ್ಪ, ಗ್ರಾಪಂ ಸದಸ್ಯರು, ಜಮಾಯತ್ ಪದಾಧಿಕಾರಿಗಳು, ಸದಸ್ಯರು ಇದ್ದರು.

ಕಕ್ಕಬೆ ಗ್ರಾಮ ಪಂಚಾಯಿತಿಯ ಕುಂಜಿಲ ಪೈನರಿ ಮಸೀದಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎ.ಎಸ್ ಪೊನ್ನಣ್ಣ ಭೂಮಿಪೂಜೆ ನೆರವೇರಿಸಿದರು. ಸೌಕತ್ ಆಲಿ, ಇಬ್ರಾಹಿಂ, ಕಲಿಯಂಡ ಸಂಪನ್ ಅಯ್ಯಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net