ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ

ಮುಟ್ಟನಹಳ್ಳಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕದಲೂರು ಉದಯ್ ಭೂಮಿಪೂಜೆ ನೆರವೇರಿಸಿದರು.
ಮುಟ್ಟನಹಳ್ಳಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕದಲೂರು ಉದಯ್ ಭೂಮಿಪೂಜೆ ನೆರವೇರಿಸಿದರು.
Published on

ಕೆ.ಎಂ.ದೊಡ್ಡಿ: ಚುನಾವಣೆ ಸಮಯದಲ್ಲಿ ರಾಜಕೀಯ ಮಾಡಬೇಕು. ಉಳಿದ ಸಮಯದಲ್ಲಿ ಗ್ರಾಮಗಳ ಅಭಿವೃದ್ಧಿಯತ್ತ ಗಮನ ಹರಿಸಬೇಕು ಎಂದು ಶಾಸಕ ಕದಲೂರು ಉದಯ್ ಸಲಹೆ ನೀಡಿದರು.

ಸಮೀಪದ ಮುಟ್ಟನಹಳ್ಳಿ ಗ್ರಾಮದಲ್ಲಿ ಸೋಮವಾರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಗ್ರಾಮ ಸಭೆಯಲ್ಲಿ ಮುಖ್ಯ ರಸ್ತೆ ಅಭಿವೃದ್ಧಿಪಡಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದರು. ಅವರ ಮನವಿಗೆ ಸ್ಪಂದಿಸಿ ಅನುದಾನ ತಂದು ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಗುಣಮಟ್ಟ ಕಾಯ್ದುಕೊಳ್ಳುವಂತೆ ಗುತ್ತಿಗೆದಾರನಿಗೆ ಸೂಚಿಸಲಾಗಿದೆ ಎಂದರು.

ಮದ್ದೂರು ಕ್ಷೇತ್ರದಲ್ಲಿ ರಸ್ತೆಗಳ ಅಭಿವೃದ್ಧಿ ಬಹಳಷ್ಟಿದ್ದು ಅವುಗಳ ಅಭಿವೃದ್ಧಿಗೆ ಹಂತ ಹಂತವಾಗಿ ಯೋಜನೆ ರೂಪಿಸಲಾಗಿದೆ. ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿಲ್ಲಿ ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಕ್ರಮ ವಹಿಸಲಾಗಿದೆ ಎಂದರು.

ಜಿಪಂ ಮಾಜಿ ಅಧ್ಯಕ್ಷ ಬಿ.ಬಸವರಾಜು, ಮಾಜಿ ಸದಸ್ಯ ಎ.ಎಸ್.ರಾಜೀವ್, ಮುಖಂಡರಾದ ಕದಲೂರು ತಿಮ್ಮೇಗೌಡ, ಮುಟ್ಟನಹಳ್ಳಿ ಚಂದ್ರಶೇಖರ್, ಎಂ.ಇ. ಮಹೇಂದ್ರ ಸೇರಿದಂತೆ ಮತ್ತಿತರರಿದ್ದರು.

ಚನ್ನಪಣ್ಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್ಚಿನ ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಶಾಸಕ ಕದಲೂರು ಉದಯ್ ತಿಳಿಸಿದರು.

ಮುಟ್ಟನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಪಿ.ಯೋಗೇಶ್ವರ್ 40 ಸಾವಿರಕ್ಕೂ ಹೆಚ್ಚು ಮತ ಪಡೆದು ಗೆಲುವು ಸಾಧಿಸಲಿದ್ದಾರೆ ಎಂದು ಭವಿಷ್ಯ ನುಡಿದರು.

ಎನ್‌ಡಿಎ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಸ್ಪರ್ಧೆ ಮಾಡಲು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅಡ್ಡಗಾಲು ಹಾಕಿದರು. ಆ ಬಳಿಕ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿಗೆ ಟಿಕೆಟ್ ನೀಡಲು ಇಲ್ಲದ ನಾಟಕೀಯ ಬೆಳವಣಿಗೆ ರೂಪಿಸಿದರು ಎಂದು ಆರೋಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net