

ಗುಂಡ್ಲುಪೇಟೆ: ತಾಲೂಕಿನ ಚಿಕ್ಕತುಪ್ಪೂರು ಗೇಟ್ ಸಮೀಪ 9 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸೋಮವಾರ ಶಾಸಕ ಎಚ್.ಎಂ.ಗಣೇಶ್‌ಪ್ರಸಾದ್ ಭೂಮಿಪೂಜೆ ನೆರವೇರಿಸಿದರು. 3 ಕೋಟಿ ರೂ. ವೆಚ್ಚದಲ್ಲಿ ಗುಂಡ್ಲುಪೇಟೆ-ಚಾಮರಾಜನಗರ ಜಿಲ್ಲಾ ಸಂಪರ್ಕ ರಸ್ತೆ ಹಾಗೂ ರಾಮನಾಥಪುರ ತೆರಕಣಾಂಬಿ ರಾಜ್ಯ ಹೆದ್ದಾರಿ ರಸ್ತೆಯ ಕಾಮಗಾರಿಯನ್ನು 3 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗಿದೆ. ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕೆ.ಎಸ್.ಮಹೇಶ್, ಎಪಿಎಂಸಿ ಅಧ್ಯಕ್ಷ ಎಂ.ಎನ್.ಬಸವರಾಜಪ್ಪ, ತಾಲೂಕು ಪಂಚಾಯಿತಿ ಮಾಜಿ ಸದಸ್ಯೆ ಜಯಂತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಶೇಖರ್ ಸೇರಿದಂತೆ ಹಲವರು ಇದ್ದರು.