

ಬೆಟ್ಟದಪುರ: ಸಮೀಪದ ಮರದೂರು ಗೇಟ್ ಬಳಿ ಕಿತ್ತೂರು-ಬೆಟ್ಟದಪುರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶುಕ್ರವಾರ ಪಶು ಸಂಗೋಪನಾ ಮತ್ತು ರೇಷ್ಮೆ ಖಾತೆ ಸಚಿವ ಕೆ.ವೆಂಕಟೇಶ್ ಭೂಮಿಪೂಜೆ ನೆರವೇರಿಸಿದರು.
ಗ್ರಾಮಗಳಿಗೆ ಪ್ರವಾಸ ಕೈಗೊಂಡಾಗ ಸ್ಥಳೀಯ ಜನರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಒದಗಿಸುವ ನಿಟ್ಟಿನಲ್ಲಿ ಹಾಗೂ ತಾಲೂಕಿನ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ರಾಜ್ಯದಲ್ಲಿ ನಮ್ಮ ಸರ್ಕಾರವು ಬಡವರ ಪರ ಯೋಜನೆಗಳನ್ನು ನೀಡುವ ಮೂಲಕ ಜನಪರ ಸರ್ಕಾರವಾಗಿದೆ ಎಂದರು.
ಸಭೆಯಲ್ಲಿ ಮರದೂರು ಗೇಟ್ ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಬಸ್ ವ್ಯವಸ್ಥೆ, ಚರಂಡಿ ನಿರ್ಮಾಣ, ರಸ್ತೆ ಅಭಿವೃದ್ಧಿ ಸೇರಿದಂತೆ ಹಲವು ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸಮಸ್ಯೆ ಬಗೆಹರಿಸುವಂತೆ ಸೂಚಿಸಿದರು.
ಪಿರಿಯಾಪಟ್ಟಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಟಿ.ಸ್ವಾಮಿ, ಎಂಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಲೋಕೇಶ್, ಮೈಮುಲ್ ನಿರ್ದೇಶಕ ಬಿ.ಸಿ ಪ್ರಕಾಶ್, ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜೇಗೌಡ, ಮುಖಂಡರಾದ ಹೊಲದಪ್ಪ, ಜವರೇಗೌಡ, ದಶರಥ, ಗಿರಿಜಾ, ಪುಟ್ಟರಾಜು, ತಹಸೀಲ್ದಾರ್ ಜೆ.ನಿಸರ್ಗ ಪ್ರಿಯಾ, ತಾ.ಪಂ ಇಒ ಸುನೀಲ್‌ಕುಮಾರ್, ಲೋಕೋಪಯೋಗಿ ಇಲಾಖೆಯ ಎಇಇ ಎಂ.ಆರ್ ವೆಂಕಟೇಶ್, ಇಂಜಿನಿಯರ್‌ಗಳಾದ ಕುಮಾರ್, ದಿನೇಶ್, ಪಶುಸಂಗೋಪನಾ ಸಹಾಯಕ ನಿರ್ದೇಶಕ ಡಾ.ಸೋಮಯ್ಯ, ಸಿಡಿಪಿಒ ವೀಣಾ, ಸರ್ಕಲ್ ಇನ್‌ಸ್ಪೆಕ್ಟರ್ ದೀಪಕ್, ಪಿಎಸ್‌ಐ ಅಜಯ್ ಕುಮಾರ್ ಸೇರಿದಂತೆ ಗ್ರಾಮಸ್ಥರು, ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಇದ್ದರು.