ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ

M.R. PATIL SANMAN
Published on

ಕುಂದಗೋಳ: ವಿಧಾನಸಭಾ ಮತಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಂ.ಆರ್. ಪಾಟೀಲ ಭಾನುವಾರ ಭೂಮಿ ಪೂಜೆ ನೆರವೇರಿಸಿದರು.

ತಾಲೂಕಿನ ಕೂಬಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಮೃತ ಯೋಜನೆ ಅಡಿ ನಿರ್ವಣವಾದ ನೂತನ ಭೋಜನಾಲಯ ಉದ್ಘಾಟಿಸಿದರು. ನಂತರ ಹಂಚಿನಾಳ ಗ್ರಾಮದ ಸ.ಹಿ.ಪ್ರಾ ಶಾಲೆಯಲ್ಲಿ ವನಮಹೋತ್ಸವಕ್ಕೆ ಚಾಲನೆ ನೀಡಿದರು. ಬಳಿಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಪ್ರಸ್ತಾವನೆ ಮೇರೆಗೆ ಸಿಎಸ್​ಆರ್ ಅನುದಾನದಡಿ 2 ಸ್ಮಾರ್ಟ್​ಕ್ಲಾಸ್​ಗಳಿಗೆ ಚಾಲನೆ ನೀಡಿ, 15 ಶಾಲಾ ಡೆಸ್ಕ್​ಗಳನ್ನು ವಿತರಿಸಲಾಯಿತು. ಹೊಸ ಹಂಚಿನಾಳ ಗ್ರಾಮದಲ್ಲಿ ಮೂರು ಹೈಮಾಸ್ಟ್ ಬೀದಿ ದೀಪಗಳನ್ನು ಉದ್ಘಾಟಿಸಿದರು. ಗ್ರಾಮಸ್ಥರು ಹಮ್ಮಿಕೊಂಡ ಸನ್ಮಾನ, ಸಮಾರಂಭದಲ್ಲಿ ಭಾಗವಹಿಸಿ ಸತ್ಕಾರ ಸ್ವೀಕರಿಸಿದರು. ಅಲ್ಲದೆ, ಇತ್ತೀಚಿನ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗೆಲುವಿಗೆ ಕಾರಣೀಭೂತರಾದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಬಿಜೆಪಿ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net