ಅಕ್ರಮ ಸಂಬಂಧ ಶಂಕೆ ಹಿನ್ನೆಲೆ ಮೈಸೂರಿನಲ್ಲಿ ಪತ್ನಿಯನ್ನು ಇರಿದು ಕೊಂದ ಭೂಪ

Crime
Published on

ಮೈಸೂರು: ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಪತ್ನಿಯನ್ನು ಚಾಕುವಿನಿಂದ ಮನಸೋಇಚ್ಛೆ ಇರಿದು ಕೊಂದ ಪತಿ ಪೊಲೀಸರಿಗೆ ಶರಣಾಗಿದ್ದಾನೆ.
ಮೈಸೂರಿನ ಜಯದೇವನಗರದಲ್ಲಿ ವಾಸವಿದ್ದ ಒಡಿಶಾ ಮೂಲದ ಕಾವೇರಿ ಗಡಾಯಿ(40) ಕೊಲೆಯಾದವರು. ಪತಿ ಪ್ರಮೋದ್ ಕುಮಾರ್ ಜನಾ (43) ಪೊಲೀಸರಿಗೆ ಶರಣಾಗಿದ್ದಾನೆ.

ವಲಸೆ ಕಾರ್ಮಿಕರಾದ ಈ ದಂಪತಿ 6 ತಿಂಗಳ ಹಿಂದೆ ಹರಿಯಾಣದಿಂದ ಮೈಸೂರಿಗೆ ಬಂದು ನೆಲೆಸಿದ್ದರು. ಜೆ.ಕೆ.ಟೈರ್ಸ್‌ನಲ್ಲಿ ಗುತ್ತಿಗೆ ಕಾರ್ಮಿಕನಾಗಿದ್ದ ಪ್ರಮೋದ್ ಪತ್ನಿಯ ಅಕ್ರಮ ಸಂಬಂಧದ ಬಗ್ಗೆ ಶಂಕಿಸುತ್ತಿದ್ದ. ಮಂಗಳವಾರ ರಾತ್ರಿಯೂ ಗಲಾಟೆ ಮಾಡಿದ್ದ. ನಂತರ ಪತ್ನಿಗೆ ಚಾಕುವಿನಿಂದ ಇರಿದು ಕೊಂದು ಮೇಟಗಳ್ಳಿ ಪೊಲೀಸರಿಗೆ ಶರಣಾಗಿದ್ದಾನೆ. ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net