ಭೂಸನೂರಮಠ ಸಾಹಿತ್ಯ ಪ್ರಶಸ್ತಿ ಪ್ರದಾನ 6ರಂದು

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ನಗರದ ಪ್ರಾ.ಸಂ.ಶಿ. ಭೂಸನೂರಮಠ ಪ್ರತಿಷ್ಠಾನ ವತಿಯಿಂದ ನಗರದ ಸುವರ್ಣ ಸಾಂಸ್ಕೃತಿಕ ಸಮುಚ್ಚಯ ಭವನದಲ್ಲಿ ನ. 6ರಂದು ಸಂಜೆ 5 ಗಂಟೆಗೆ 2024ನೇ ಸಾಲಿನ ಪ್ರಾ. ಸಂ.ಶಿ. ಭೂಸನೂರಮಠ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಹಿರಿಯ ಸಾಹಿತಿಗಳಿಗೆ ಗೌರವ ಸನ್ಮಾನ ಏರ್ಪಡಿಸಲಾಗಿದೆ.

ಕರ್ನಾಟಕ ವಿಶ್ವ ವಿದ್ಯಾಲಯದ ಕನ್ನಡ ಅಧ್ಯಯನ ಪೀಠದ ವಿಶ್ರಾಂತ ಪ್ರಾಧ್ಯಾಪಕ ಡಾ. ಬಿ.ವಿ. ಶಿರೂರ ಅವರ ಸಾಹಿತ್ಯ ಸಾಧನೆ ಪರಿಗಣಿಸಿ 2024ನೇ ಸಾಲಿನ ಪ್ರಾ. ಸಂ.ಶಿ. ಭೂಸನೂರಮಠ ಸಾಹಿತ್ಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ತೋಂಟದಾರ್ಯ ಸಂಸ್ಥಾನ ಮಠದ ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಕನ್ನಡ ಅಧ್ಯಯನ ಪೀಠದ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಧನವಂತ ಹಾಜವಗೋಳ ಅಭಿನಂದನ ನುಡಿಗಳನ್ನಾಡಲಿದ್ದಾರೆ.

ಪ್ರಾಧ್ಯಾಪಕಿ ಸುಜಾತಾ ದೇವರಮನಿ ಅವರು ಶೂನ್ಯ ಸಂಪಾದನೆ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ವಿಶ್ರಾಂತ ಪ್ರಾಧ್ಯಾಪಕ ಡಾ. ಜಿ.ಎಂ. ಹೆಗಡೆ ಅವರಿಗೆ ಹಿರಿಯ ನಾಗರಿಕ ಸನ್ಮಾನ ನೀಡಿ ಗೌರವಿಸಲಾಗುವುದು. ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಪ್ರೊ. ಮಲ್ಲಿಕಾರ್ಜುನ ಹಿರೇಮಠ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರತಿಷ್ಠಾನದ ಉಪಾಧ್ಯಕ್ಷ ಪ್ರೊ. ಸುಭಾಷ ಭೂಸನೂರಮಠ, ಡಾ.ಡಿ.ಎಂ. ಹಿರೇಮಠ, ಕಾರ್ಯದರ್ಶಿ ಶಶಿಧರ ತೋಡಕರ, ಕೋಶಾಧ್ಯಕ್ಷ ಡಾ. ಕುಮಾರ ಹಿರೇಮಠ, ಸಹ ಕಾರ್ಯದರ್ಶಿ ಡಾ. ಬಸವರಾಜ ಉಡಕೇರಿ ಹಾಗೂ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net