ಭೂತಪ್ಪ ಸ್ವಾಮಿ ಜಾತ್ರಾ ಮಹೋತ್ಸವ

1blrp1
Published on

ಹಾಸನ: ಬೇಲೂರು ತಾಲೂಕಿನ ಅರೇಹಳ್ಳಿ ಸಮೀಪದ ಮಲ್ಲಾಪುರ ಗ್ರಾಮದಲ್ಲಿ ಪ್ರಧಾನ ಅರ್ಚಕ ಹಾಲಪ್ಪಸ್ವಾಮಿ ಹಾಗೂ ಗ್ರಾಮಸ್ಥರ ನೇತೃತ್ವದಲ್ಲಿ ಸೋಮವಾರ ಮತ್ತು ಮಂಗಳವಾರ ಭೂತಪ್ಪ ಸ್ವಾಮಿ ದೇವರ 17ನೇ ವರ್ಷದ ಜಾತ್ರಾ ಮಹೋತ್ಸವ ನೆರವೇರಿತು.


ಸೋಮವಾರ ಭೂತಪ್ಪ ಸ್ವಾಮಿ ಉತ್ಸವ ಮೂರ್ತಿಗೆ ಗಂಗಾಪೂಜೆ, ಗಣಪತಿ ಪೂಜೆ, ಪಂಚಾಮೃತ ಅಭಿಷೇಕ ನೆರವೇರಿಸಲಾಯಿತು.

ನಂತರ ಸ್ವಾಮಿಗೆ ಮಹಾ ರುದ್ರಾಭಿಷೇಕ ಹಾಗೂ ಕೆಂಚಪ್ಪ ಸ್ವಾಮಿಗೆ ಪಂಚಾಮೃತ ಅಭಿಷೇಕ ಏರ್ಪಡಿಸಲಾಗಿತ್ತು. ಮಂಗಳವಾರ ಲೋಕದಮ್ಮನಿಗೆ ವಿಶೇಷ ಪೂಜೆ ನೆರವೇರಿಸಿ ಮಹಾ ಮಂಗಳಾರತಿ ಮಾಡಲಾಯಿತು. ನಂತರ ನೆರೆದಿದ್ದ ಎಲ್ಲ ಭಕ್ತರಿಗೂ ಅನ್ನ ಸಂತರ್ಪಣೆ ಮಾಡಲಾಯಿತು. ಪೂಜಾ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ವೀರಗಾಸೆ ಕುಣಿತ ಜಾತ್ರ ಮಹೋತ್ಸವಕ್ಕೆ ಮೆರಗು ನೀಡಿತು.

ಜಾತ್ರ ಮಹೋತ್ಸವದಲ್ಲಿ ಮಲ್ಲಾಪುರ ಗ್ರಾಮಸ್ಥರು ಹಾಗೂ ಸುತ್ತಮುತ್ತಲ ಗ್ರಾಮಗಳ ಭಕ್ತರು ನೂರಾರು ಸಂಖ್ಯೆಯಲ್ಲಿ ಆಗಮಿಸಿ ದೇವರ ಕೃಪೆಗೆ ಪಾತ್ರರಾದರು.

ಚಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net