

ಬೆಟ್ಟದಪುರ: ಬೆಟ್ಟದಪುರ ಸಮೀಪದ ಭುವನಹಳ್ಳಿ ಮೂರುರಮ್ಮ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಇತ್ತೀಚೆಗೆ ಆಯೋಜಿಸಿದ್ದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಬಾಲಕ ಮತ್ತು ಬಾಲಕಿಯರ ಖೋ ಖೋ ಪ್ರಥಮ, ಬಾಲಕರ ಬ್ಯಾಡ್ಮಿಂಟನ್ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬಾಲಕರ 3,000 ಮೀ . ಓಟ, ರಿಲೇ, ಉದ್ದಜಿಗಿತ, ಗುಂಡು ಎಸೆತ, ಬಾಲಕಿಯರ ವಿಭಾಗದಲ್ಲಿ 1,500 ಮೀ ಓಟ, ಉದ್ದ ಜಿಗಿತ, ಜಾವಲಿನ್, ತ್ರಿವಿದ ಜಿಗಿತ ವಿಭಾಗಗಳಲ್ಲಿ ವಿದ್ಯಾರ್ಥಿಗಳು ಮೇಲುಗೈ ಸಾಧಿಸಿದ್ದಾರೆ. ಶಾಲೆ ವತಿಯಿಂದ ಕ್ರೀಡಾಪಟುಗಳನ್ನು ಅಭಿನಂದಿಸಲಾಯಿತು.
ಎಸ್‌ಡಿಎಂಸಿ ಅಧ್ಯಕ್ಷ ಶೇಖರ್, ಶಾಲಾ ಮುಖ್ಯಶಿಕ್ಷಕಿ ಸರೋಜಾ, ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಬಿ.ವಿ.ಗಿರೀಶ್, ಹೇಮಾಪ್ರಭಾ, ಶಾಲಾ ಶಿಕ್ಷಣ ತಜ್ಞ ಬಿ.ಕೆ.ನಾಗೇಂದ್ರ, ಶಿಕ್ಷಕರಾದ ನರಸಿಂಹಮೂರ್ತಿ, ತಿಪ್ಪೇಸ್ವಾಮಿ, ವಿಜಯಕುಮಾರ್, ಶಿವಶಂಕರ್ ಇದ್ದರು.