ಮತದಾನ ಜಾಗೃತಿಗಾಗಿ ಬೈಸಿಕಲ್ ಜಾಥಾ

bicycle jatha
Published on

ಹುಬ್ಬಳಿ: ಭಾರತ ಚುನಾವಣಾ ಆಯೋಗ, ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಸ್ವಿಪ್ ಸಮಿತಿಯಿಂದ ಮತದಾನ ಜಾಗೃತಿಗಾಗಿ ನಗರದಲ್ಲಿ ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಸಹಯೋಗದೊಂದಿಗೆ ಬೈಸಿಕಲ್ ಜಾಥಾ ಆಯೋಜಿಸಲಾಗಿತ್ತು.

ಚನ್ನಮ್ಮ ವೃತ್ತದಲ್ಲಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಪಂ ಯೋಜನಾ ನಿರ್ದೇಶಕಿ ರೇಖಾ ಡೊಳ್ಳಿನವರ ಮಾತನಾಡಿ, ಮತದಾನ ಪ್ರತಿ ಅರ್ಹ ನಾಗರಿಕನ ಹಕ್ಕು ಮತ್ತು ಜವಾಬ್ದಾರಿಯಾಗಿದೆ. ಉತ್ತಮ ಜನಪ್ರತಿನಿಧಿ ಮತ್ತು ಉತ್ತಮ ಸರ್ಕಾರದ ಆಯ್ಕೆಗಾಗಿ ಪ್ರತಿಯೊಬ್ಬರು ತಪ್ಪದೆ ಮತದಾನ ಮಾಡಬೇಕು ಎಂದು ಹೇಳಿದರು.

ಜಾಥಾದಲ್ಲಿ ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಸದಸ್ಯರು, ಸ್ಕೆಟಿಂಗ್ ಕ್ರೀಡಾಪಟುಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು. ಜಾಥಾವು ನಗರದ ಜನನಿಬಿಡ ಪ್ರದೇಶದಲ್ಲಿ ಸಂಚರಿಸಿ, ಮತದಾನ ಕುರಿತು ಜಾಗೃತಿ ಮೂಡಿಸಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net