ಮೈಸೂರಿನಲ್ಲಿ ಸಂವಿಧಾನ ಜಾಗೃತಿಗೆ ಸೈಕಲ್ ರ‍್ಯಾಲಿ

Bicycle Rally for Constitution Awareness in Mysore
Published on

ಮೈಸೂರು: ಸಂವಿಧಾನದ ಮಹತ್ವವನ್ನು ಪ್ರತಿಯೊಬ್ಬರು ತಿಳಿದುಕೊಂಡು ಅಳವಡಿಸಿಕೊಳ್ಳಬೇಕು ಎಂದು ನಗರ ಪಾಲಿಕೆ ಆಯುಕ್ತ ಅಶಾದ್ ಉರ್ ರೆಹಮಾನ್ ಷರೀಫ್ ಹೇಳಿದರು.

ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಏರ್ಪಡಿಸಿದ್ದ ಸೈಕಲ್ ರ‍್ಯಾಲಿಗೆ ಚಾಲನೆ ನೀಡಿ ಮಾತನಾಡಿ, ಅಂಬೇಡ್ಕರ್ ದೇಶಕ್ಕೆ ಅತ್ಯುತ್ತಮವಾದ ಸಂವಿಧಾನವಾದ ನೀಡಿದ್ದಾರೆ. ನಾವು ಇಂದು ನೆಮ್ಮದಿಯ ಜೀವನ ನಡೆಸುತ್ತಿರುವುದು ಸಂವಿಧಾನ ನೀಡಿರುವ ಕೊಡುಗೆಯಾಗಿದೆ ಎಂದರು.

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಂಗೇಗೌಡ ಸಂವಿಧಾನ ಪೀಠಿಕೆ ಬೋಧಿಸಿದರು. ಈ ಸಂದರ್ಭ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಟಿ.ಕೆ. ಹರೀಶ್, ನಗರ ಪಾಲಿಕೆ ವಲಯ ಆಯುಕ್ತರಾದ ಎಂ.ಎಸ್. ಪ್ರತಿಭಾ, ಮಂಜುನಾಥ ರೆಡ್ಡಿ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net