ರಾಯಚೂರು ಬೀದರ್ ನಗರಸಭೆಗೆ ಮಹಾನಗರ ಪಾಲಿಕೆ ಭಾಗ್ಯ : ಸಂಪುಟ ಅಸ್ತು

IMG-20240917-WA0013
Published on

ಶಹಪುರ ನಗರಕ್ಕೆ ಒಳಚರಂಡಿ ವ್ಯವಸ್ಥೆ ಕಲ್ಪಿಸಲು 292.98 ಕೋಟಿ ನೀಡಲು ಕಲಬುರಗಿ ಕ್ಯಾಬಿನೆಟ್ ಒಪ್ಪಿಗೆ

ಕಲಬುರಗಿ : ಇಲ್ಲಿ ಈಗ ಪೂರ್ಣಗೊಂಡ ಸಚಿವ ಸಂಪುಟ ಸಭೆಯಲ್ಲಿ ಯಾದಗಿರಿ ಜಿಲ್ಲೆಯ ಶಹಪುರ ನಗರಕ್ಕೆ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಯೋಜನೆಗೆ 292.98 ಕೋಟಿ ನೀಡಲು ಒಪ್ಪಿಗೆ ನೀಡಲಾಯಿತು.

ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆ ಗಳ ಕಾರ್ಯಾಚರಣೆ ಮತ್ತು ನಿರ್ವಹಣೆಯ ನೀತಿ ಜಾರಿಗೊಳಿಸಲು ಸಂಪುಟ ಒಪ್ಪಿಗೆ ದೊರಕಿತು.

*ರಾಯಚೂರು ಮತ್ತು ಬೀದರ್ ನಗರಸಭೆಯನ್ನು ಮಹಾನಗರ ಪಾಲಿಕೆ ಮೇಲ್ದರ್ಜೆಗೇರಿಸಲು ಒಪ್ಪಿಗೆ ನೀಡಲಾಯಿತು. ಮುಂದಿನ ಕೆಲ ದಿನಗಳಲ್ಲಿ ಈ ಪ್ರಕ್ರಿಯೆ ಆರಂಭಗೊಳ್ಳುವುದು ಎಂದು ಸಂಪುಟ ಸಭೆಯ ಬಳಿಕ ಸಿಎಂ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net