

ಬೀದರ್: ಬಸವಕಲ್ಯಾಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಲ್ಲಿಕಾರ್ಜುನ ಖೂಬಾ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಲಾಗಿದೆ.
ಪಕ್ಷ ವಿರೋಧಿ ಚಟುವಟಿಕೆ ಆಧಾರದ ಮೇಲೆ ಮಲ್ಲಿಕಾರ್ಜುನ ಖೂಬಾ ಅವರನ್ನು ಬಿಜೆಪಿಯಿಂದ ಆರು ವರ್ಷದವರೆಗೆ ಉಚ್ಚಾಟಿಸಲಾಗಿದೆ ಎಂದು ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ತಿಳಿಸಿದ್ದಾರೆ.
ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ್ ವಿರುದ್ಧ ಬಂಡುಕೋರ ಅಭ್ಯರ್ಥಿಯಾಗಿ ಚುನಾವಣೆಗೆ ನಿಂತು ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದಿರಿ. ಎಲ್ಲಾ ರೀತಿಯ ಎಚ್ಚರಿಕೆ ನೀಡಿದರೂ ನೀವು ಚುನಾವಣಾ ಕಣದಿಂದ ಹಿಂದೆ ಸರಿದಿಲ್ಲ. ಈ ಕಾರಣಕ್ಕೆ ನಿಮ್ಮನ್ನು ಪಕ್ಷದಿಂದ ಆರು ವರ್ಷ ಉಚ್ಚಾಟಿಸಲಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಬೀದರ್ ಜಿಲ್ಲಾ ಬಿಜೆಪಿ ಪ್ರಮುಖ ಮುಖಂಡರಾಗಿದ್ದ ಮಲ್ಲಿಕಾರ್ಜುನ ಖೂಬಾ ಅವರು ಕ್ಷೇತ್ರದಲ್ಲಿ ಕಾಂಗ್ರಸ್, ಬಿಜೆಪಿ ಅಭ್ಯರ್ಥಿಗೆ ಪ್ರಬಲ ಪೈಪೋಟಿ ಒಡ್ಡಿದ್ದಾರೆ.