ಪೂರ್ವನಿಗದಿತ ಕಾರ್ಯಕ್ರಮದ ನಿಮಿತ್ತ ಆಂಧ್ರಪ್ರದೇಶಕ್ಕೆ ತೆರಳಿರುವ ಶಾಸಕರು, ಆಸ್ಪತ್ರೆಯಲ್ಲಿರುವ ಬಾಲಕಿಯ ಪಾಲಕರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಆರೋಗ್ಯದ ಕುರಿತು ಮಾಹಿತಿ ಪಡೆದರು. ಬಳಿಕ ಚಿಕಿತ್ಸೆ ನೀಡುತ್ತಿರುವ ವೈದ್ಯರೊಂದಿಗೆ ಮಾತನಾಡಿ, ಮಗುವಿನ ಆರೋಗ್ಯ ಸ್ಥಿತಿಗತಿ ಮತ್ತು ಚಿಕಿತ್ಸೆಯ ವಿವರಗಳನ್ನು ಪಡೆದರು. ನನ್ನ ಕ್ಷೇತ್ರದ ಬಾಲಕಿಯನ್ನು ಸರಿಯಾಗಿ ನೋಡಿಕೊಳ್ಳಬೇಕು. ಉತ್ತಮ ಚಿಕಿತ್ಸೆ ನೀಡಿ ಶೀಘ್ರ ಗುಣಮುಖವಾಗಿಸಬೇಕೆಂದು ಸೂಚಿಸಿದರು.