ಬಸವಕಲ್ಯಾಣದ ಅಕ್ಕಮಹಾದೇವಿ ಕಾಲೇಜು ಆವರಣದಲ್ಲಿ ಜಿಲ್ಲೆಯ ಮಠಾಧೀಶರು ಮತ್ತು ಭಕ್ತರು ಕಾರ್ಯಕ್ರಮ ಆಯೋಜನೆಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ಕನ್ಹೇರಿ ಶ್ರೀಗಳು ಬಸವತತ್ವ ಪ್ರಚಾರಕ ಮಠಾಧೀಶರನ್ನು ಅವಾಚ್ಯ ಪದಗಳಿಂದ ನಿಂದಿಸಿ ಅವಹೇಳನ ಮಾಡಿದ ಹಿನ್ನೆಲೆ ಕರ್ನಾಟಕ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಹಾಗೂ ವಿವಿಧ ಬಸವಪರ ಸಂಘಟನೆಗಳು ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದ್ದವು.