ಅಮೃತ ಮಹೋತ್ಸವಕ್ಕೆ ಮಧುಸೂದನ ಶ್ರೀಗೆ ಆಹ್ವಾನ

ಭಾಲ್ಕಿಯ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಶ್ರೀ ಗುರುಬಸವ ಪಟ್ಟದ್ದೇವರು ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದ ಶ್ರೀ ಮಧುಸೂದನ ಸಾಯಿ ಅವರನ್ನು ಭೇಟಿಯಾಗಿ ಅಮೃತ ಮಹೋತ್ಸವಕ್ಕೆ ಆಹ್ವಾನ ನೀಡಿದರು. ಶಶಿಧರ ಕೋಸಂಬೆ ಇದ್ದರು.
ಭಾಲ್ಕಿಯ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಶ್ರೀ ಗುರುಬಸವ ಪಟ್ಟದ್ದೇವರು ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದ ಶ್ರೀ ಮಧುಸೂದನ ಸಾಯಿ ಅವರನ್ನು ಭೇಟಿಯಾಗಿ ಅಮೃತ ಮಹೋತ್ಸವಕ್ಕೆ ಆಹ್ವಾನ ನೀಡಿದರು. ಶಶಿಧರ ಕೋಸಂಬೆ ಇದ್ದರು.
Published on
ಭಾಲ್ಕಿ: ಪಟ್ಟಣದಲ್ಲಿ 2026ರ ಏ.20ರಿಂದ ಮೂರು ದಿವಸ ಆಯೋಜಿಸಿದ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ಸಮಾರಂಭಕ್ಕೆ ಶ್ರೀ ಮಧುಸೂದನ ಸಾಯಿ ಅವರನ್ನು ಆಹ್ವಾನಿಸಲಾಗಿದೆ.
ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮಕ್ಕೆ ಈಚೆಗೆ ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಶ್ರೀ ಗುರುಬಸವ ಪಟ್ಟದ್ದೇವರು ಅವರು ಮಧುಸೂದನ ಸಾಯಿ ಶ್ರೀ ಅವರನ್ನು ಭೇಟಿಯಾಗಿ ಪೂಜ್ಯರ ಅಮೃತ ಮಹೋತ್ಸವ ಸಮಾರಂಭಕ್ಕೆ ಆಹ್ವಾನ ನೀಡಿದರು.
ರಾಜ್ಯದ ಕಿರೀಟ, ಗಡಿ ಜಿಲ್ಲೆ ಬೀದರ್ನಲ್ಲಿ ಪಟ್ಟದ್ದೇವರು ಬಸವ ತತ್ವ ಪ್ರಚಾರ, ಪ್ರಸಾರದ ಜೊತೆಗೆ ಶೈಕ್ಷಣಿಕ, ಸಾಮಾಜಿಕ, ಅಧ್ಯಾತ್ಮ ಕ್ಷೇತ್ರಗಳಲ್ಲಿ ಯಾವುದೇ ಪ್ರಚಾರದ ಹಂಗಿಲ್ಲದೆ ಅತ್ಯುತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ಅಂಥ ಶ್ರೀಗಳು 75ರ ವಸಂತದ ಹೊಸ್ತಿಲಲ್ಲಿದ್ದಾರೆ. ಅವರ ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಿಸಲು ಅಸಂಖ್ಯಾತ ಭಕ್ತರು ನಿರ್ಧರಿಸಿದ್ದಾರೆ. ಹೀಗಾಗಿ ಕಾರ್ಯಕ್ರಮಕ್ಕೆ ತಾವುಗಳು ಸಾಕ್ಷಿಯಾಗಿ ಭಕ್ತರಿಗೆ ಆಶೀರ್ವದಿಸಬೇಕು ಎಂದು ಪಟ್ಟದ್ದೇವರು ಮನವಿ ಮಾಡಿದ್ದಾರೆ.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net