ಆತ್ಮಹತ್ಯೆ ಪ್ರಕರಣ ಉನ್ನತ ಮಟ್ಟದ ತನಿಖೆಗೆ ಆಗ್ರಹ

ಡಾ. ತಾನಾಜಿ ಸಗರ್
ಡಾ. ತಾನಾಜಿ ಸಗರ್
Published on
ಬೀದರ್: ಮೈಸೂರು ಜಿಲ್ಲೆಯ ಟಿ. ನರಸಿಪುರ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ನಡೆದ ಉಪ್ಪಾರ ಸಮಾಜದ ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣದ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಜಿಲ್ಲಾ ಉಪ್ಪಾರ ಸಮಾಜದ ಅಧ್ಯಕ್ಷ ಡಾ. ತಾನಾಜಿ ಸಗರ್ ಆಗ್ರಹಿಸಿದ್ದಾರೆ.
ಉಲ್ಲಾಸಗೌಡ ಎಂಬಾತನ ಮಾನಸಿಕ ಕಿರುಕುಳ ಹಾಗೂ ಬೆದರಿಕೆಯಿಂದ ಮನ ನೊಂದು ಶಿವಣ್ಣ, ಅವರ ಪತ್ನಿ ನಾಗರತ್ನ ಹಾಗೂ ಹಸೆಮಣೆ ಏರಬೇಕಿದ್ದ ಮಗಳು ರಕ್ಷಿತಾಳೊಂದಿಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿಸಿದ್ದಾರೆ.
ಉಪ್ಪಾರ ಸಮಾಜದ ಮೇಲೆ ಮೇಲಿಂದ ಮೇಲೆ ಶೋಷಣೆ ನಡೆಯುತ್ತಿರುವುದು ಆಘಾತಕಾರಿಯಾಗಿದೆ. ಆತ್ಮಹತ್ಯೆ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಸಂತ್ರಸ್ತ ಕುಟುಂಬಕ್ಕೆ ರೂ. 75 ಲಕ್ಷ ಪರಿಹಾರ ಒದಗಿಸಬೇಕು ಎಂದು ಬೇಡಿಕೆ ಮಂಡಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net