ಸ್ವಯಂ ಪ್ರೇರಣೆಯಿಂದ ರಕ್ತದಾನ ಶಿಬಿರ

ಬೀದರ್‍ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ ಪ್ರಯುಕ್ತ ರಕ್ತದಾನ ಶಿಬಿರ ಜರುಗಿತು.
ಬೀದರ್‍ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ ಪ್ರಯುಕ್ತ ರಕ್ತದಾನ ಶಿಬಿರ ಜರುಗಿತು.
Published on
ಬೀದರ್: ವೈದ್ಯರ ದಿನಾಚರಣೆ ನಿಮಿತ್ತ ಇಲ್ಲಿಯ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬ್ರಿಮ್ಸ್)ಯ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ನಡೆಯಿತು.
್ದಶಿಬಿರದಲ್ಲಿ ಅನೇಕರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿದರು.
ರಕ್ತದಾನವು ತುರ್ತು ಸಂದರ್ಭದಲ್ಲಿ ರೋಗಿಗಳ ಜೀವ ಉಳಿಸಲು ನೆರವಾಗುತ್ತದೆ. ರಕ್ತದಾನದಿಂದ ಯಾವುದೇ ಅಡ್ಡ ಪರಿಣಾಮ ಉಂಟಾಗುವುದಿಲ್ಲ. ಹೀಗಾಗಿ ಎಲ್ಲರೂ ರಕ್ತದಾನಕ್ಕೆ ಮುಂದೆ ಬರಬೇಕು ಎಂದು ಬ್ರಿಮ್ಸ್ ನಿರ್ದೇಶಕಿ ಡಾ. ಶಾಂತಲಾ ಕೌಜಲಗಿ ಹೇಳಿದರು.
ಬ್ರಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ. ಶಿವಯೋಗಿ ಬಾಲಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಅಹಮ್ಮದೊದ್ದೀನ್, ಸಿಬ್ಬಂದಿ ಸೋಮನಾಥ ಪಾಂಚಾಳ, ಆಕಾಶ ಪಾಟೀಲ, ಜೇಸನ್ ಮೋಡಿ, ಪ್ರಶಾಂತ ಗುತ್ತೆದಾರ ಮತ್ತಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net