ಬೀದರ್‍ನಲ್ಲಿ ನಾಟ್ಯಶ್ರೀ ನೃತ್ಯಾಲಯ ಯುವತಿಯರ ಸಂಘದಿಂದ ನಡೆದ ಶ್ಯಾಮಪ್ರಸಾದ್ ಮುಖರ್ಜಿ ಅವರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳ ವಿಜೇತರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಬೀದರ್: ನಾಟ್ಯಶ್ರೀ ನೃತ್ಯಾಲಯ ಯುವತಿಯರ ಸಂಘದಿಂದ ನಗರದ ಸಂಘದ ಕಚೇರಿಯಲ್ಲಿ ಶ್ಯಾಮಪ್ರಸಾದ್ ಮುಖರ್ಜಿ ಅವರ ಜಯಂತಿ ಆಚರಿಸಲಾಯಿತು. ಶ್ಯಾಮಪ್ರಸಾದ್ ಮುಖರ್ಜಿ ಅವರ ಜೀವನ ಹಾಗೂ ಸಾಧನೆ ಕುರಿತು ಗುರುನಾನಕ ದೇವ ಎಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕಿ ಪೂರ್ಣಿಮಾ ವಿಶೇಷ ಉಪನ್ಯಾಸ ನೀಡಿದರು. ಸ್ಮತಿ, ಶ್ರದ್ಧಾ, ಸೋನಾಕ್ಷಿ ಹಾಗೂ ಮಾನ್ಯತಾ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ನಾಟ್ಯಶ್ರೀ ನೃತ್ಯಾಲಯದ ಅಧ್ಯಕ್ಷೆ ರಾಣಿ ಸತ್ಯಮೂರ್ತಿ ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿ ಕು. ಭಾಗ್ಯಶ್ರೀ ಸ್ವಾಗತಿಸಿದರು. ಕು. ನಿತ್ಯಾ ವಂದಿಸಿದರು. ಸಂಘದ ಸದಸ್ಯರು ಹಾಗೂ ಪಾಲಕರು ಹಾಜರಿದ್ದರು. ನಾಟ್ಯಶ್ರೀ ನೃತ್ಯಾಲಯ ಯುವತಿಯರ ಸಂಘ ಹಾಗೂ ಮೇರಾ ಯುವ ಭಾರತ್ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.