ವಿಜು ಪಾಟೀಲ, ರೆಡ್ಡಿಗೆ ಸನ್ಮಾನ

ಬೀದರ್‍ನ ಮಹಾಲಕ್ಷ್ಮಿ ಸಭಾಂಗಣದಲ್ಲಿ ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ವ್ಯವಸ್ಥಾಪಕ ಮಂಡಳಿ ನೂತನ ಸದಸ್ಯ ವಿಜಯಕುಮಾರ ಪಾಟೀಲ ಗಾದಗಿ ಹಾಗೂ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿವೃತ್ತ ಪ್ರಧಾನ ವ್ಯವಸ್ಥಾಪಕ ವಿಠ್ಠಲರೆಡ್ಡಿ ಅವರನ್ನು ಸನ್ಮಾನಿಸಲಾಯಿತು.
ಬೀದರ್‍ನ ಮಹಾಲಕ್ಷ್ಮಿ ಸಭಾಂಗಣದಲ್ಲಿ ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ವ್ಯವಸ್ಥಾಪಕ ಮಂಡಳಿ ನೂತನ ಸದಸ್ಯ ವಿಜಯಕುಮಾರ ಪಾಟೀಲ ಗಾದಗಿ ಹಾಗೂ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿವೃತ್ತ ಪ್ರಧಾನ ವ್ಯವಸ್ಥಾಪಕ ವಿಠ್ಠಲರೆಡ್ಡಿ ಅವರನ್ನು ಸನ್ಮಾನಿಸಲಾಯಿತು.
Published on
ಬೀದರ್: ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ವ್ಯವಸ್ಥಾಪಕ ಮಂಡಳಿ ನೂತನ ಸದಸ್ಯ ವಿಜಯಕುಮಾರ(ವಿಜು) ಪಾಟೀಲ ಗಾದಗಿ ಹಾಗೂ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿವೃತ್ತ ಪ್ರಧಾನ ವ್ಯವಸ್ಥಾಪಕ ವಿಠ್ಠಲರೆಡ್ಡಿ ಅವರನ್ನು ನಗರದ ಮಹಾಲಕ್ಷ್ಮಿ ಸಭಾಂಗಣದಲ್ಲಿ ಸನ್ಮಾನಿಸಲಾಯಿತು.
ಶ್ರೀ ಬಾಲಾಜಿ ವಿವಿದೊದ್ದೇಶ ಸಹಕಾರ ಸಂಘದ ನಿರ್ದೇಶಕ ಪರಮೇಶ್ವರ್ ಮುಗಟೆ ಅವರು ಶಾಲು ಹೊದಿಸಿ, ಹೂಮಾಲೆ ಹಾಕಿ, ಬಿದ್ರಿ ಕಲೆಯ ಬಸವಣ್ಣ ಹಾಗೂ ಬೆಳ್ಳಿಯ ಗಣೇಶ ವಿಗ್ರಹ ನೆನಪಿನ ಕಾಣಿಕೆಯಾಗಿ ನೀಡಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಪ್ರೊ. ಸಿದ್ರಾಮಪ್ಪ ಮಾಸಿಮಾಡೆ ಹಾಗೂ ಪತ್ರಕರ್ತ ಸದಾನಂದ ಜೋಶಿ ಅವರು ವಿಜು ಪಾಟೀಲ ಹಾಗೂ ವಿಠ್ಠಲ ರೆಡ್ಡಿ ಅವರ ಕುರಿತು ಮಾತನಾಡಿದರು.
ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಕಿಶನ್ ಪಾಟೀಲ, ವಿಶ್ವ ಹಿಂದೂ ಪರಿಷತ್ತಿನ ರಾಮಕೃಷ್ಣ ಸಾಳೆ, ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಡಾ. ನೀಲಾಂಬಿಕಾ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ ಬಿರಾದಾರ ಚಿದ್ರಿ, ಉದ್ಯಮಿ ಕೆ. ಸತ್ಯಮೂರ್ತಿ, ಅಧಿಕಾರಿ ಸಂಗಮೇಶ, ಪ್ರಮುಖರಾದ ವೀರೇಂದ್ರ ರಾಜಪುರೆ, ಸೋಮನಾಥ ಬಿರಾದಾರ ಮತ್ತಿತರರು ಇದ್ದರು.
ಶ್ರೀ ಬಾಲಾಜಿ ವಿವಿದೊದ್ದೇಶ ಸಹಕಾರ ಸಂಘದ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net