ಹೆಣ್ಣುಮಕ್ಕಳು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲಿ

ಬೀದರ್‍ನ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದಲ್ಲಿ ಎಂ.ಎ. ಕನ್ನಡ, ಅರ್ಥಶಾಸ್ತ್ರ, ಎಂ.ಕಾಂ. ಹಾಗೂ ಬಿ.ಎಸ್ಸಿ ಗಣಿತ ವಿಭಾಗದ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.
ಬೀದರ್‍ನ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದಲ್ಲಿ ಎಂ.ಎ. ಕನ್ನಡ, ಅರ್ಥಶಾಸ್ತ್ರ, ಎಂ.ಕಾಂ. ಹಾಗೂ ಬಿ.ಎಸ್ಸಿ ಗಣಿತ ವಿಭಾಗದ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.
Published on
ಬೀದರ್: ಹೆಣ್ಣುಮಕ್ಕಳು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಜಿಲ್ಲಾ ಪದವಿಪೂರ್ವ ಉಪನ್ಯಾಸಕರ ಸಂಘದ ಪ್ರಧಾನ ಕಾರ್ಯದರ್ಶಿ ಸೂರ್ಯಕಾಂತ ಐನಾಪುರೆ ಹೇಳಿದರು.
ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದಲ್ಲಿ ಬುಧವಾರ ನಡೆದ ಎಂ.ಎ. ಕನ್ನಡ, ಅರ್ಥಶಾಸ್ತ್ರ, ಎಂ.ಕಾಂ. ಹಾಗೂ ಬಿ.ಎಸ್ಸಿ ಗಣಿತ ವಿಭಾಗದ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹೆಣ್ಣುಮಕ್ಕಳು ತಾವು ಕಲಿತ ವಿದ್ಯೆಯನ್ನು ವ್ಯರ್ಥ ಮಾಡಿಕೊಳ್ಳಬಾರದು. ಅದನ್ನು ಇತರರಿಗೆ ಧಾರೆ ಎರೆಯಬೇಕು ತಿಳಿಸಿದರು.
ಶ್ರೀ ಚಂದ್ರಪ್ಪ ಗೌರಶೆಟ್ಟಿ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಡಾ. ಚಂದ್ರಪ್ಪ ಭತಮುರ್ಗೆ ಮಾತನಾಡಿ, ಅಕ್ಕ ಮಹಾದೇವಿ ಸಮಾಜದ ಉದ್ಧಾರಕ್ಕೆ ತಮ್ಮ ಬದುಕು ಮೀಸಲಾಗಿಟ್ಟಿದ್ದರು. ವಿದ್ಯಾರ್ಥಿಯರು ಯಾವುದೇ ಕಾಯಕ ಮಾಡಿದರೂ, ಭಕ್ತಿ, ಶ್ರದ್ಧೆಯಿಂದ ಮಾಡಬೇಕು ಎಂದು ಹೇಳಿದರು.
ಸದ್ಗುರು ಸಿದ್ಧಾರೂಢ ಮಹಿಳಾ ಪದವಿ ಕಾಲೇಜಿನ ಪ್ರಾಚಾರ್ಯ ನಾಗಪ್ಪ ಜಾನಕನೋರ ಮಾತನಾಡಿ, ಸ್ನಾತಕೋತ್ತರ ಪದವಿ ಪಡೆದ ಹೆಣ್ಣುಮಕ್ಕಳಿಗೆ ಬಹಳಷ್ಟು ಅವಕಾಶಗಳು ಇವೆ. ಮಹಿಳೆಯರು ಅವುಗಳ ಸದುಪಯೋಗ ಪಡೆದು, ಸಮಾಜದಲ್ಲಿ ತಮ್ಮದೇ ಆದ ಛಾಪು ಮೂಡಿಸಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಡಾ.ಆರ್.ವಿ. ಗಂಗಶೆಟ್ಟಿ ಮಾತನಾಡಿ, ಸ್ನಾತಕೋತ್ತರ ಪದವಿ ಪೂರೈಸಿದ ಹೆಣ್ಣುಮಕ್ಕಳಿಗೆ ಸಂಶೋಧನೆಗೆ ಹೆಚ್ಚಿನ ಅವಕಾಶಗಳು ಇವೆ ಎಂದು ತಿಳಿಸಿದರು.
ಹೆಣ್ಣುಮಕ್ಕಳು ಉನ್ನತ ಶಿಕ್ಷಣ ಪಡೆಯುವ ಜತೆಗೆ, ಜ್ಞಾನ ಹಾಗೂ ಕೌಶಲ ಹೆಚ್ಚಿಸಿಕೊಳ್ಳಬೇಕು ಎಂದು ತಿಳಿಸಿದರು.
ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವು ಹೆಣ್ಣುಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡುತ್ತಿದೆ. ಮಹಿಳಾ ಸಬಲೀಕರಣಕ್ಕೆ ಶ್ರಮಿಸುತ್ತಿದೆ ಎಂದು ಹೇಳಿದರು.
ಉಪನ್ಯಾಸಕರಾದ ಡಾ.ಪಂಡಿತ, ಡಾ.ಸಂಗಪ್ಪ ತೌಡಿ, ಈಶ್ವರ ರೆಡ್ಡಿ, ಶ್ರೀಲತಾ, ಪ್ರೇಮಲತಾ, ಸಿಬ್ಬಂದಿ ಮನೋಹರ ಶೆಟ್ಟಿ, ಮಹೇಶ, ಲಕ್ಷ್ಮಿ, ಮಲ್ಲಿಕಾರ್ಜುನ ಮತ್ತಿತರರು ಇದ್ದರು.
ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಅಂತಿಮ ವರ್ಷದ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಲಾಯಿತು. ಧನಲಕ್ಷ್ಮಿ ನಿರೂಪಿಸಿದರು. ಶ್ರುತಿ ಸ್ವಾಗತಿಸಿದರು. ದೀಪಿಕಾ ವಂದಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net