ಎಚ್.ಎಂ. ರೇವಣ್ಣಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿ

ಪಂಡಿತರಾವ್ ಚಿದ್ರಿ
ಪಂಡಿತರಾವ್ ಚಿದ್ರಿ
Published on
ಬೀದರ್: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಎಚ್.ಎಂ. ರೇವಣ್ಣ ಅವರನ್ನು ನೇಮಕ ಮಾಡಬೇಕು ಎಂದು ಜಿಲ್ಲೆಯ ಕಾಂಗ್ರೆಸ್ ಹಿರಿಯ ಮುಖಂಡರೂ ಆದ ರಾಜ್ಯ ಕುರಿ ಮಹಾ ಮಂಡಳದ ನಿರ್ದೇಶಕ ಪಂಡಿತರಾವ್ ಚಿದ್ರಿ ಆಗ್ರಹಿಸಿದ್ದಾರೆ.
ರೇವಣ್ಣ ಅವರು ಕಾಂಗ್ರೆಸ್ ಹಿರಿಯ ಮುಖಂಡರಾಗಿದ್ದಾರೆ. ಶಾಸಕ, ಸಚಿವರಾಗಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದ್ದಾರೆ. ಪ್ರಸ್ತುತ ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾಗಿದ್ದಾರೆ. ಪಕ್ಷದ ವಿವಿಧ ಹುದ್ದೆಗಳನ್ನು ಬಹಳ ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ ಎಂದು ತಿಳಿಸಿದ್ದಾರೆ.
ಐದು ದಶಕಗಳಿಂದ ಸಾರ್ವಜನಿಕ ಜೀವನದಲ್ಲಿ ಇರುವ ರೇವಣ್ಣ ಅವರು ಎಲ್ಲ ಜಾತಿ, ಸಮುದಾಯಗಳ ಜನರ ಪ್ರೀತಿ, ವಿಶ್ವಾಸ ಗಳಿಸಿದ್ದಾರೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಅವರ ಬೆಂಬಲಿಗರು ಹಾಗೂ ಅಭಿಮಾನಿ ಬಳಗ ಇದೆ ಎಂದು ಹೇಳಿದ್ದಾರೆ.
ಕುರುಬ ಸಮುದಾಯ ರಾಜ್ಯದ ಅತಿ ದೊಡ್ಡ ಸಮುದಾಯಗಳಲ್ಲಿ ಒಂದಾಗಿದೆ. ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಅವರು ನಿರ್ಗಮಿಸಿರುವುದರಿಂದ ಪ್ರಮುಖ ಹುದ್ದೆಗಳಲ್ಲಿ ಸಮುದಾಯದ ಪ್ರಾತಿನಿಧ್ಯ ಇಲ್ಲದಂತಾಗಿದೆ. ಕುರುಬ ಸಮುದಾಯದ ಈ ಕೊರಗನ್ನು ಎಚ್.ಎಂ. ರೇವಣ್ಣ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಡುವ ಮೂಲಕ ಹೋಗಲಾಡಿಸಬೇಕಾಗಿದೆ ಎಂದು ತಿಳಿಸಿದ್ದಾರೆ.
ರೇವಣ್ಣ ಅವರು ಅಹಿಂದ ಮತಗಳು ಸೇರಿದಂತೆ ಎಲ್ಲ ಸಮುದಾಯಗಳ ಮತ ಸೆಳೆಯುವ ವರ್ಚಸ್ಸು ಹೊಂದಿದ್ದಾರೆ. ಅವರಿಗೆ ಕೆಪಿಸಿಸಿ ಸಾರಥ್ಯ ವಹಿಸಿದರೆ 2028 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net