ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಿ.ಮೀ 0ರಿಂದ 100ರವರೆಗಿನ ಕಾಲುವೇ ಆಧುನೀಕರಣ ಕಾಮಗಾರಿಯಲ್ಲಿ ಬಿಟ್ಟುಹೋಗಿರುವ ವಿತರಣಾ ಕಾಲುವೆ, ಉಪ ಕಾಲುವಗಳನ್ನೂ ಆಧುನೀಕರಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಈ ಕಾಮಗಾರಿಗಳ ಒಟ್ಟು ವೆಚ್ಚ 2023-24ರ ದರಪಟ್ಟಿಯನ್ವಯ 180 ಕೋಟಿ ರೂ. ಆಗಿದ್ದು, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಮೊದಲನೇ ಹಂತದಲ್ಲಿ 60 ಕೋಟಿ ರೂ. ಕಾಮಗಾರಿ ಕೈಗೊಳ್ಳಲು ಅನುಮತಿ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.