ಸಚಿವ ಸ್ಥಾನಕ್ಕಾಗಿ 27ಕ್ಕೆ ತಿರುಪತಿಯಲ್ಲಿ ಪೂಜೆ

ಜಾನಸನ್ ಘೋಡೆ
ಜಾನಸನ್ ಘೋಡೆ
Published on
ಬೀದರ್: ಶಾಸಕ ರಹೀಂಖಾನ್ ಅವರಿಗೆ ಸಚಿವ ಸ್ಥಾನ ಸಿಗಲೆಂದು ಪ್ರಾರ್ಥಿಸಿ ಜುಲೈ 27 ರಂದು ಆಂಧ್ರಪ್ರದೇಶದ ತಿರುಪತಿಯ ವೆಂಕಟೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುವುದು ಎಂದು ಕಾಂಗ್ರೆಸ್ ಕಿಸಾನ್ ವಿಭಾಗದ ರಾಷ್ಟ್ರೀಯ ಜಂಟಿ ಸಂಯೋಜಕ ಜಾನಸನ್ ಘೋಡೆ ತಿಳಿಸಿದ್ದಾರೆ.
ಸೋಮವಾರ ತಿರುಪತಿಗೆ ತೆರಳಲಾಗುವುದು. ಅಲ್ಲಿ ಶಾಸಕರ ಭಾವಚಿತ್ರದೊಂದಿಗೆ ದೇವರಿಗೆ ಪೂಜೆ ಸಲ್ಲಿಸಲಾಗುವುದು. ಸಚಿವ ಸ್ಥಾನಕ್ಕಾಗಿ ಪ್ರಾರ್ಥಿಸಲಾಗುವುದು ಎಂದು ಹೇಳಿದ್ದಾರೆ.
ಎರಡು ಬಾರಿ ಸಚಿವ ಹಾಗೂ ನಾಲ್ಕನೇ ಸಲ ಶಾಸಕರಾಗಿರುವ ರಹೀಂಖಾನ್ ಅವರು ಜಿಲ್ಲೆ ಹಾಗೂ ರಾಜ್ಯದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಇನ್ನಷ್ಟು ಜನ ಕಲ್ಯಾಣ ಕಾರ್ಯಗಳಿಗಾಗಿ ಅವರಿಗೆ ಮತ್ತೊಮ್ಮೆ ಸಚಿವ ಸ್ಥಾನ ದೊರೆಯಬೇಕೆಂಬ ಅಪೇಕ್ಷೆ ಕಾರ್ಯಕರ್ತರದ್ದಾಗಿದೆ ಎಂದು ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net