ಐವನ್ ಡಿಸೋಜಾಗೆ ಸಚಿವ ಸ್ಥಾನ ನೀಡಿ

ಜಾರ್ಜ್ ಫರ್ನಾಂಡೀಸ್
ಜಾರ್ಜ್ ಫರ್ನಾಂಡೀಸ್
Published on
ಬೀದರ್: ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರಿಗೆ ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬರಲಿರುವ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಕ್ರೈಸ್ತ ಸಮಾಜದ ಮುಖಂಡರೂ ಆದ ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಜಾರ್ಜ್ ಫರ್ನಾಂಡೀಸ್ ಒತ್ತಾಯಿಸಿದ್ದಾರೆ.
ಐವನ್ ಡಿಸೋಜಾ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದಾರೆ. ವಿಧಾನ ಪರಿಷತ್ ಮುಖ್ಯ ಸಚೇತಕರಾಗಿ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಪಕ್ಷ ಹಾಗೂ ಸರ್ಕಾರ ಮಟ್ಟದಲ್ಲಿ ತನಗೆ ವಹಿಸಿಕೊಟ್ಟ ಕೆಲಸಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ಕ್ರೈಸ್ತ ಸಮಾಜವೂ ಪ್ರಮುಖ ಪಾತ್ರ ವಹಿಸಿದೆ. ಹೀಗಾಗಿ ಸಮಾಜಕ್ಕೆ ನ್ಯಾಯ ಕಲ್ಪಿಸಬೇಕಾಗಿದೆ. ಕಾಂಗ್ರೆಸ್ ಹೈಕಮಾಂಡ್ ಐವನ್ ಡಿಸೋಜಾ ಅವರಿಗೆ ಸಚಿವ ಸ್ಥಾನ ಕೊಡುವ ಮೂಲಕ ಕ್ರೈಸ್ತ ಸಮುದಾಯಕ್ಕೆ ಪ್ರಾತಿನಿಧ್ಯ ಕಲ್ಪಿಸಬೇಕು. ಈ ಮೂಲಕ ಕ್ರೈಸ್ತರ ಅಭಿವೃದ್ಧಿಗೆ ನೆರವಾಗಬೇಕು ಎಂದು ಮನವಿ ಮಾಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net