ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ, ವಿಬಿ ಜಿ ರಾಮ್ ಜಿ ಹಾಗೂ ಜಲ ಜೀವನ್ ಮಿಷನ್ (ಜೆಜೆಎಂ) ಯೋಜನೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ವಿಬಿ ಜಿ ರಾಮ್ ಜಿ ಯೋಜನೆಯಡಿಯಲ್ಲಿ ವೈಯಕ್ತಿಕ ಹಾಗೂ ಗುಂಪುಗಳಾಗಿ ಮಾನವ ದಿನಗಳನ್ನು ಸೃಷ್ಟಿಸಲು ಸಾಕಷ್ಟು ಅವಕಾಶಗಳಿದ್ದು, ಇದರಿಂದ ವಲಸೆ ಹೋಗುವುದನ್ನು ತಡೆಗಟ್ಟಬಹುದಾಗಿದೆ. ಯೋಜನೆಯಡಿ ಕೆಲಸ ಬಯಸಿ ಬಂದವರಿಗೆ ತಕ್ಷಣ ಉದ್ಯೋಗ ನೀಡಿ ಜಾಬ್ ಕಾರ್ಡ್ ನೀಡಲು ಕ್ರಮವಹಿಸಬೇಕು ಎಂದು ಹೇಳಿದರು.