ಹಾಳಾದ ಮುಖ್ಯ ರಸ್ತೆ ದುರಸ್ತಿಪಡಿಸಿ

ಜಾನಸನ್ ಘೋಡೆ
ಜಾನಸನ್ ಘೋಡೆ
Published on

ಬೀದರ್: ನಗರದಲ್ಲಿ ಹಾಳಾದ ಮುಖ್ಯ ರಸ್ತೆಗಳನ್ನು ಕೂಡಲೇ ದುರಸ್ತಿಪಡಿಸಬೇಕು ಎಂದು ಕಾಂಗ್ರೆಸ್ ಕಿಸಾನ್ ವಿಭಾಗದ ರಾಷ್ಟ್ರೀಯ ಜಂಟಿ ಸಂಯೋಜಕ ಜಾನಸನ್ ಘೋಡೆ ಬೇಡಿಕೆ ಮಂಡಿಸಿದ್ದಾರೆ.

ಮೂರು-ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಬೊಮ್ಮಗೊಂಡೇಶ್ವರ ವೃತ್ತದಿಂದ ಗುಂಪಾ, ಚಿದ್ರಿ, ರಂಗ ಮಂದಿರ, ಓಲ್ಡ್ ಸಿಟಿ ಮೊದಲಾದ ಪ್ರದೇಶಗಳ ಪ್ರಮುಖ ರಸ್ತೆಗಳಲ್ಲಿ ತಗ್ಗು-ದಿನ್ನೆಗಳು ಸೃಷ್ಟಿಯಾಗಿವೆ ಎಂದು ತಿಳಿಸಿದ್ದಾರೆ.

ಹಾಳಾದ ರಸ್ತೆಗಳು ಸುಗಮ ಸಂಚಾರಕ್ಕೆ ತೊಡಕಾಗಿವೆ. ರಸ್ತೆಗಳಲ್ಲಿ ನೀರು ಸಂಗ್ರಹವಾಗುತ್ತಿರುವ ಕಾರಣ ತಗ್ಗು ಕಾಣಿಸದೆ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ ಎಂದು ಹೇಳಿದ್ದಾರೆ.

ಮಹಾನಗರ ಪಾಲಿಕೆ ಹಾಗೂ ಲೋಕೋಪಯೋಗಿ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net