ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನಕ್ಕೆ ಒತ್ತಾಯ

ತಾನಾಜಿ ಸಗರ್
ತಾನಾಜಿ ಸಗರ್
Published on
ಬೀದರ್: ರಾಜ್ಯದ ಉಪ್ಪಾರ ಸಮಾಜದ ಏಕೈಕ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರಿಗೆ ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಜಿಲ್ಲಾ ಉಪ್ಪಾರ ಸಮಾಜದ ಅಧ್ಯಕ್ಷ ತಾನಾಜಿ ಸಗರ್ ಒತ್ತಾಯಿಸಿದ್ದಾರೆ.
ಪುಟ್ಟರಂಗಶೆಟ್ಟಿ ಚಾಮರಾಜನಗರ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. ನಾಲ್ಕನೇ ಬಾರಿಗೆ ಶಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಉಪ್ಪಾರ ಸಮಾಜದ ರಾಜ್ಯ ಅಧ್ಯಕ್ಷರು ಕೂಡ ಆಗಿದ್ದಾರೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಸುಮಾರು 40 ಲಕ್ಷ ಉಪ್ಪಾರ ಸಮಾಜದ ಜನಸಂಖ್ಯೆ ಇದೆ. ಪುಟ್ಟರಂಗಶೆಟ್ಟಿ ಅವರು ಕಳೆದ ಚುನಾವಣೆಯಲ್ಲಿ ಉಪ್ಪಾರ ಸಮಾಜದ ಸಂಪೂರ್ಣ ಮತಗಳು ಕಾಂಗ್ರೆಸ್‍ಗೆ ಬರಲು ಕಾರಣಕರ್ತರಾಗಿದ್ದಾರೆ. ಪಕ್ಷ ಹಾಗೂ ಸಮಾಜಕ್ಕಾಗಿ ದುಡಿಯುತ್ತಾ ಬಂದಿದ್ದಾರೆ. ಸಮಾಜಕ್ಕೆ ರಾಜಕೀಯ ಬಲ ನೀಡಲು ಅವರಿಗೆ ಸಚಿವ ಸ್ಥಾನ ಕಲ್ಪಿಸಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net