ನಶೆ ಮುಕ್ತ ಯುವ ಸಂಕಲ್ಪ ಅಭಿಯಾನ

ಬೀದರ್‍ನ ಶರಣಬಸವೇಶ್ವರ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನಲ್ಲಿ ಆಯೋಜಿಸಿದ್ದ ವಿಕಸಿತ ಭಾರತಕ್ಕಾಗಿ ನಶೆ ಮುಕ್ತ ಯುವ ಸಂಕಲ್ಪ ಅಭಿಯಾನ ಕಾರ್ಯಕ್ರಮದಲ್ಲಿ ಮಾದಕ ವಸ್ತುಗಳಿಂದ ದೂರ ಇರುವ ಪ್ರತಿಜ್ಞೆ ಮಾಡಲಾಯಿತು.
ಬೀದರ್‍ನ ಶರಣಬಸವೇಶ್ವರ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನಲ್ಲಿ ಆಯೋಜಿಸಿದ್ದ ವಿಕಸಿತ ಭಾರತಕ್ಕಾಗಿ ನಶೆ ಮುಕ್ತ ಯುವ ಸಂಕಲ್ಪ ಅಭಿಯಾನ ಕಾರ್ಯಕ್ರಮದಲ್ಲಿ ಮಾದಕ ವಸ್ತುಗಳಿಂದ ದೂರ ಇರುವ ಪ್ರತಿಜ್ಞೆ ಮಾಡಲಾಯಿತು.
Published on

ಬೀದರ್: ವಿಕಸಿತ ಭಾರತಕ್ಕಾಗಿ ನಶೆ ಮುಕ್ತ ಯುವ ಸಂಕಲ್ಪ ಅಭಿಯಾನ ಕಾರ್ಯಕ್ರಮ ನಗರದ ಶರಣಬಸವೇಶ್ವರ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನಲ್ಲಿ ಈಚೆಗೆ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ಬೀದರ್ ದಕ್ಷಿಣ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು, ವಿಕಸಿತ ಭಾರತಕ್ಕಾಗಿ ಯುವಕರು ಮಾದಕ ವ್ಯಸನಗಳಿಂದ ದೂರ ಇರಬೇಕು. ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಯ್ದುಕೊಳ್ಳಬೇಕು ಎಂದು ಉದ್ಘಾಟನೆ ನೆರವೇರಿಸಿದ ಬೀದರ್ ದಕ್ಷಿಣ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು.

ಬೀದರ್ ಉಪ ವಿಭಾಗಾಧಿಕಾರಿ ಮುಹಮ್ಮದ್ ಶಕೀಲ್, ಕಲಬುರಗಿಯ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜು ನಿರ್ದೇಶಕಿ ಡಾ. ಉಮಾ ದೇಶಮುಖ, ಮೇರಾ ಯುವ ಭಾರತ್‍ನ ಜಿಲ್ಲಾ ಯುವ ಅಧಿಕಾರಿ ನಿಖಿಲಕುಮಾರ, ಕಾಲೇಜು ಪ್ರಾಚಾರ್ಯ ಡಾ. ಸತೀಶ್ ಪ್ರತಾಪುರ, ಎನ್.ಎಸ್.ಎಸ್. ವಿಶೇಷ ಅಧಿಕಾರಿ ರವಿಂದ್ರಕುಮಾರ ಇದ್ದರು. 300 ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರ ಇರುವ ಪ್ರತಿಜ್ಞೆ ಮಾಡಿದರು.

ಅತಿಥಿಗಳು, ಗಣ್ಯರು ಹಾಗೂ ವಿದ್ಯಾರ್ಥಿಗಳು ಪ್ರಧಾನಿ ನರೇಂದ್ರ ಮೋದಿ ಅವರಿಂದ ನಡೆದ ಅಭಿಯಾನದ ವರ್ಚುಯಲ್ ಚಾಲನೆ ಕಾರ್ಯಕ್ರಮವನ್ನು ಎಲ್‍ಇಡಿ ಪರದೆಯಲ್ಲಿ ವೀಕ್ಷಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net