ಶೈಕ್ಷಣಿಕ ಸಾಹಿತ್ಯ ಸಮ್ಮೇಳನ 8ರಂದು

ವಿಜಯಕುಮಾರ ಪಾಟೀಲ ಯರನಳ್ಳಿ
ವಿಜಯಕುಮಾರ ಪಾಟೀಲ ಯರನಳ್ಳಿ
Published on

ಬೀದರ್: ಕನ್ನಡ ಸಾಹಿತ್ಯ ಪರಿಷತ್‍ನ ಬೀದರ್ ಉತ್ತರ ಘಟಕದಿಂದ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಆಗಸ್ಟ್ 8 ರಂದು ಬೀದರ್ ತಾಲ್ಲೂಕು ಪ್ರಥಮ ಶೈಕ್ಷಣಿಕ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ.

ಮುಖ್ಯಶಿಕ್ಷಕ ವಿಜಯಕುಮಾರ ಪಾಟೀಲ ಯರನಳ್ಳಿ ಅವರ ಸರ್ವಾಧ್ಯಕ್ಷತೆಯಲ್ಲಿ ಸಮ್ಮೇಳನ ನಡೆಯಲಿದ್ದು, ಈಗಾಗಲೇ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಕನ್ನಡ ಸಾಹಿತ್ಯ ಪರಿಷತ್‍ನ ಬೀದರ್ ಉತ್ತರ ಘಟಕದ ಅಧ್ಯಕ್ಷ ಪರಮೇಶ್ವರ್ ಬಿರಾದಾರ ತಿಳಿಸಿದ್ದಾರೆ.

ಬೆಳಿಗ್ಗೆ 8.30ಕ್ಕೆ ಬಿ.ವಿ. ಭೂಮರಡ್ಡಿ ಕಾಲೇಜಿನಿಂದ ಪ್ರಮುಖ ಬೀದಿಗಳ ಮೂಲಕ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದ ವರೆಗೆ ಅಲಂಕೃತ ಸಾರೋಟಿನಲ್ಲಿ ಸಮ್ಮೇಳನ ಸರ್ವಾಧ್ಯಕ್ಷ ವಿಜಯಕುಮಾರ ಪಾಟೀಲ ಯರನಳ್ಳಿ ಹಾಗೂ ಕನ್ನಡ ತಾಯಿ ಭುವನೇಶ್ವರಿ ಭಾವಚಿತ್ರದ ವೈಭವದ ಮೆರವಣಿಗೆ ನಡೆಯಲಿದೆ. ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಮೆರವಣಿಗೆಗೆ ಚಾಲನೆ ನೀಡಲಿದ್ದು, ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಡಾ. ರಜನೀಶ್ ವಾಲಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹೇಳಿದ್ದಾರೆ.

ರಂಗ ಮಂದಿರದಲ್ಲಿ ಬೆಳಿಗ್ಗೆ 11ಕ್ಕೆ ನಡೆಯಲಿರುವ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕರ ಸಂಘದ ರಾಜ್ಯ ಅಧ್ಯಕ್ಷ ಸಂದೀಪ್ ಬೂದಿಹಾಳ್ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು ದಿವ್ಯ ಸಾನಿಧ್ಯ, ಹೆಡಗಾಪುರದ ಶಿವಲಿಂಗ ಶಿವಾಚಾರ್ಯ ನೇತೃತ್ವ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಈಶ್ವರ ಖಂಡ್ರೆ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ವಿಜಯಕುಮಾರ ಪಾಟೀಲ ಯರನಳ್ಳಿ ಸಮ್ಮೇಳನಾಧ್ಯಕ್ಷರ ನುಡಿ ಆಡುವರು. ಬೀದರ್ ದಕ್ಷಿಣ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಸ್ಮರಣ ಸಂಚಿಕೆ, ಬೀದರ್ ಶಾಸಕ ರಹೀಂಖಾನ್ ಪುಸ್ತಕ ಮಳಿಗೆ ಉದ್ಘಾಟಿಸುವರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಘನ ಉಪಸ್ಥಿತಿ ವಹಿಸುವರು ಎಂದು ಹೇಳಿದ್ದಾರೆ.

ವಿಧಾನ ಪರಿಷತ್ ಸದಸ್ಯರಾದ ಡಾ. ಚಂದ್ರಶೇಖರ ಪಾಟೀಲ, ಎಂ.ಜಿ. ಮುಳೆ, ಬಿಡಿಎ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಎನ್‍ಎಸ್‍ಎಸ್‍ಕೆ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ, ಬಿಡಿಎ ಮಾಜಿ ಅಧ್ಯಕ್ಷ ಬಾಬುವಾಲಿ, ಪ್ರಮುಖರಾದ ಜೈರಾಜ ಖಂಡ್ರೆ, ಸೋಮಶೇಖರ ಬಿರಾದಾರ, ಶಶಿಧರ ಹೊಸಳ್ಳಿ, ಬಸವರಾಜ ಧನ್ನೂರ, ಚಂದ್ರಶೇಖರ ಪಾಟೀಲ ಕಲಬುರಗಿ, ರವೀಂದ್ರರೆಡ್ಡಿ ಮಾಲಿಪಾಟೀಲ, ಶೇಕ್ ಮೆಹಬೂಬ್ ಪಟೇಲ್ ಡಾ. ಸಚಿನ್ ವಿ. ಪಾಟೀಲ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಪರಿಷತ್ ಬೀದರ್ ಉತ್ತರ ಘಟಕದ ಅಧ್ಯಕ್ಷ ಪರಮೇಶ್ವರ್ ಬಿರಾದಾರ ಪ್ರಾಸ್ತಾವಿಕವಾಗಿ ಮಾತನಾಡುವರು ಎಂದು ಹೇಳಿದ್ದಾರೆ.

ಮಧ್ಯಾಹ್ನ 1.30ಕ್ಕೆ ಸಮ್ಮೇಳನಾಧ್ಯಕ್ಷರ ಜೀವನ ಸಾಧನೆ ಕುರಿತು ಎ.ಬಿ.ಆರ್.ಎಸ್.ಎಂ. ಮಾಧ್ಯಮಿಕ ವಿಭಾಗದ ಪ್ರಮುಖ ಶಿವಾನಂದ ಸಿಂಧನಕೇರಾ ಅಧ್ಯಕ್ಷತೆಯಲ್ಲಿ ವಿಶೇಷ ಉಪನ್ಯಾಸ ನಡೆಯಲಿದೆ. ಪ್ರೊ. ಮಲ್ಲಪ್ಪ ಬೋತಗಿ ಉಪನ್ಯಾಸ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

ಮಧ್ಯಾಹ್ನ 2.30ಕ್ಕೆ ನರೇಂದ್ರ ಪದವಿಪೂರ್ವ ಕಾಲೇಜು ಅಧ್ಯಕ್ಷ ಡಾ. ಚಂದ್ರಕಾಂತ ಪಾಟೀಲ ಚಿಮಕೋಡ್ ಅಧ್ಯಕ್ಷತೆಯಲ್ಲಿ ಶಿಕ್ಷಣದ ಅಸ್ಮಿತೆ ಗೋಷ್ಠಿ ಜರುಗಲಿದೆ. ಡಾ. ಶಿವಲಿಂಗ ಹೇಡೆ, ಗೀತಾ ಎಸ್. ಗಡ್ಡಿ, ರೇವಣಸಿದ್ದಪ್ಪ ಜಲಾದೆ ಉಪನ್ಯಾಸ ನೀಡಲಿದ್ದಾರೆ ಎಂದು ಹೇಳಿದ್ದಾರೆ.

ಸಂಜೆ 4.30ಕ್ಕೆ ಕಸಾಪ ನಿಕಟಪೂರ್ವ ಅಧ್ಯಕ್ಷ ಪ್ರೊ. ಸಿದ್ರಾಮಪ್ಪ ಮಾಸಿಮಾಡೆ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಲಿದೆ. ಕರ್ನಾಟಕ ಕಾಲೇಜು ಪ್ರಾಚಾರ್ಯ ಡಾ. ಬಸವರಾಜ ಬಲ್ಲೂರ ಆಶಯ ನುಡಿ ಆಡಲಿದ್ದಾರೆ ಎಂದು ತಿಳಿಸಿದ್ದಾರೆ.

ಸಂಜೆ 6.45ಕ್ಕೆ ಸನ್ಮಾನ ಹಾಗೂ ಸಮಾರೋಪ ಸಮಾರಂಭ ನಡೆಯಲಿದೆ. ಹುಲಸೂರಿನ ಶಿವಾನಂದ ಸ್ವಾಮೀಜಿ ದಿವ್ಯ ಸಾನಿಧ್ಯ, ಬಸವ ಸೇವಾ ಪ್ರತಿಷ್ಠಾನದ ಅಧ್ಯಕ್ಷೆ ಡಾ. ಗಂಗಾಂಬಿಕೆ ಅಕ್ಕ ನೇತೃತ್ವ ವಹಿಸಲಿದ್ದಾರೆ. ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಣ ಸಂಘದ ಅಧ್ಯಕ್ಷ ಅನಿಲಕುಮಾರ ಬಿರಾದಾರ ಸಮಾರೋಪ ನುಡಿ ಆಡಲಿದ್ದಾರೆ. ಸಂಸದ ಸಾಗರ್ ಖಂಡ್ರೆ, ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ, ಮಖಂಡರಾದ ಕುಶಾಲ್ ಪಾಟೀಲ ಗಾದಗಿ, ಸೋಮನಾಥ ಪಾಟೀಲ, ರಮೇಶ್ ಪಾಟೀಲ ಸೋಲಪುರ, ಸೋಮಶೇಖರ ಪಾಟೀಲ ಗಾದಗಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪರಿಷತ್ ಬೀದರ್ ಉತ್ತರ ಘಟಕದ ಅಧ್ಯಕ್ಷ ಪರಮೇಶ್ವರ್ ಬಿರಾದಾರ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್ ಚನಶೆಟ್ಟಿ, ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ವಿಜಯಕುಮಾರ ಎಸ್. ಪಾಟೀಲ ಗಾದಗಿ, ಬೀದರ್ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಜಗನ್ನಾಥ ಸಿರಕಟನಳ್ಳಿ ಹಾಗೂ ಕೆಎಸ್‍ಸಿಎ ರಾಯಚೂರು ವಲಯದ ಮಾಧ್ಯಮ ಸಂಯೋಜಕ ಅನಿಲಕುಮಾರ ದೇಶಮುಖ ಅವರನ್ನು ಸನ್ಮಾನಿಸಲಾಗುವುದು ಎಂದು ಹೇಳಿದ್ದಾರೆ.

ಶಿಕ್ಷಣ ಪ್ರೇಮಿಗಳು, ಸಾಹಿತ್ಯ ಆಸಕ್ತರು, ಕನ್ನಡಾಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net