ಬಡ ಹೆಣ್ಣುಮಕ್ಕಳಿಗೆ ಉಚಿತ ಶಿಕ್ಷಣ

ಮಹೇಶ ರಾಂಪುರೆ
ಮಹೇಶ ರಾಂಪುರೆ
Published on
ಬೀದರ್: ತಾಲ್ಲೂಕಿನ ಹಮಿಲಾಪುರದ ವಿ.ಎಂ. ರಾಂಪುರೆ ಪಬ್ಲಿಕ್ ಶಾಲೆಯು 2026-27ನೇ ಶೈಕ್ಷಣಿಕ ವರ್ಷದಲ್ಲಿ ಬಡ ಕುಟುಂಬಗಳ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ನಿರ್ಧರಿಸಿದೆ.
ಸಾವಿತ್ರಿಬಾಯಿ ಫುಲೆ ಅವರ ಸವಿ ನೆನಪಿಗಾಗಿ ಪ್ರತಿ ವರ್ಷದಂತೆ ಈ ವರ್ಷವೂ ಹೆಣ್ಣುಮಕ್ಕಳಿಗೆ ಉಚಿತ ಪ್ರವೇಶ ನೀಡಲಾಗುವುದು. ಅನಾಥ ಮಕ್ಕಳಿಗೆ ಪಠ್ಯಪುಸ್ತಕ ಹಾಗೂ ಸಮವಸ್ತ್ರ ಉಚಿತವಾಗಿ ವಿತರಿಸಲಾಗುವುದು ಎಂದು ಶಾಲೆಯ ಅಧ್ಯಕ್ಷ ಮಹೇಶ ಎಸ್. ರಾಂಪುರೆ ತಿಳಿಸಿದ್ದಾರೆ.
ನರ್ಸರಿಯಿಂದ ಐದನೇ ತರಗತಿ ವರೆಗಿನ ಹೆಣ್ಣುಮಕ್ಕಳು ಶಾಲೆಯಲ್ಲಿ ಪ್ರವೇಶ ಪಡೆಯಬಹುದು ಎಂದು ಹೇಳಿದ್ದಾರೆ.
ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9731777282 ಅಥವಾ 7022777662 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net