ಖರ್ಗೆಗೆ ಅಪಮಾನ, ಅಪ್ಪೆ ಖಂಡನೆ

Vinod Kumar Appe
Vinod Kumar Appe
Published on

ಬೀದರ್: ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಪಮಾನಿಸಿರುವ ಘಟನೆಯನ್ನು ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವಿನೋದಕುಮಾರ ಅಪ್ಪೆ ತೀವ್ರವಾಗಿ ಖಂಡಿಸಿದ್ದಾರೆ.

ದಲಿತ ಸಮುದಾಯಕ್ಕೆ ಸೇರಿದ ಖರ್ಗೆ ಅವರು ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿ ಹೋಗಿದ್ದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಶುದ್ಧೀಕರಣ ಹೋಮ ಮಾಡಿರುವುದು ಅಕ್ಷಮ್ಯ ಎಂದು ಹೇಳಿದ್ದಾರೆ.

ಖರ್ಗೆ ಅವರನ್ನು ಅವಮಾನಿಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ನೈತಿಕ ಹೊಣೆ ಹೊತ್ತು ಉತ್ತರಾಖಂಡ ಮುಖ್ಯಮಂತ್ರಿ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net