ಸಂಚಾರ ದಟ್ಟಣೆ ಸಮಸ್ಯೆ ಪರಿಹರಿಸಿ

ಬೀದರ್ ನಗರದಲ್ಲಿ ಸುಗಮ ಸಂಚಾರಕ್ಕೆ ಮಾಸ್ಟರ್ ಪ್ಲಾನ್ ರೂಪಿಸಬೇಕು ಎಂದು ಒತ್ತಾಯಿಸಿ ನಮ್ಮ ಕರ್ನಾಟಕ ಸೇನೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಬೀದರ್ನಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸುರೇಖಾ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಬೀದರ್ ನಗರದಲ್ಲಿ ಸುಗಮ ಸಂಚಾರಕ್ಕೆ ಮಾಸ್ಟರ್ ಪ್ಲಾನ್ ರೂಪಿಸಬೇಕು ಎಂದು ಒತ್ತಾಯಿಸಿ ನಮ್ಮ ಕರ್ನಾಟಕ ಸೇನೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಬೀದರ್ನಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸುರೇಖಾ ಅವರಿಗೆ ಮನವಿ ಪತ್ರ ಸಲ್ಲಿಸಿದರು.
Published on

ಬೀದರ್: ನಗರದಲ್ಲಿ ಸಂಚಾರ ದಟ್ಟಣೆ ಸಮಸ್ಯೆ ಪರಿಹರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಮ್ಮ ಕರ್ನಾಟಕ ಸೇನೆ ಆಗ್ರಹಿಸಿದೆ.
ಸೇನೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದಲ್ಲಿ ಶನಿವಾರ ಈ ಕುರಿತು ಜಿಲ್ಲಾಧಿಕಾರಿ ಅವರಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಸುರೇಖಾ ಅವರಿಗೆ ಸಲ್ಲಿಸಿದರು.
ನಗರದ ಬಹುತೇಕ ಶಾಪಿಂಗ್ ಮಾಲ್, ಹೋಟೆಲ್, ವಸತಿಗೃಹ, ಆಸ್ಪತ್ರೆ, ವಾಣಿಜ್ಯ ಮಳಿಗೆ ಮತ್ತಿತರ ಕಟ್ಟಡಗಳಲ್ಲಿ ಪಾಕಿರ್ಂಗ್ ವ್ಯವಸ್ಥೆ ಇಲ್ಲದ ಕಾರಣ ವಾಹನಗಳು ರಸ್ತೆ ಮೇಲೆಯೇ ನಿಲುಗಡೆ ಆಗುತ್ತಿವೆ. ಇದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಕೆಲವೊಮ್ಮೆ ಟ್ರಾಫಿಕ್ ಜಾಮ್ ಕೂಡ ಆಗುತ್ತಿದೆ ಎಂದು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಪಾಟೀಲ ಜ್ಯಾಂತಿ ಗಮನ ಸೆಳೆದರು.
ಪಾಕಿರ್ಂಗ್ ವ್ಯವಸ್ಥೆ ಇಲ್ಲದ ವಾಣಿಜ್ಯ ಕಟ್ಟಡಗಳ ವಿರುದ್ಧ ಕ್ರಮ ಜರುಗಿಸಬೇಕು. ಶಿವನಗರ ಬಳಿ ರಸ್ತೆ ಬದಿಯಲ್ಲಿ ವಾಹನ ಹಾಗೂ ಬಂಡಿಗಳ ನಿಲುಗಡೆಯಿಂದ ಆಗುತ್ತಿರುವ ಟ್ರಾಫಿಕ್ ಜಾಮ್ ಸಮಸ್ಯೆ ಬಗೆಹರಿಸಬೇಕು. ಬೀದಿ ಬದಿ ವ್ಯಾಪಾರಿಗಳಿಗೆ ಸ್ಥಳ ನಿಗದಿಪಡಿಸಬೇಕು. ನೌಬಾದ್ ಬಸವೇಶ್ವರ ವೃತ್ತ ಸೇರಿ ನಗರದ ವೃತ್ತಗಳಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಸಿ, ಸಂಚಾರ ದಟ್ಟಣೆ ನಿಯಂತ್ರಿಸಬೇಕು. ಕೇಂದ್ರ ಬಸ್ ನಿಲ್ದಾಣ ಸಮೀಪ ಆಟೋ ಹಾಗೂ ಇತರ ವಾಹನ ನಿಲ್ಲಿಸುವುದನ್ನು ನಿಬರ್ಂಧಿಸಬೇಕು. ಭಾರಿ ವಾಹನಗಳ ನಗರ ಪ್ರವೇಶಕ್ಕೆ ಸಮಯ ನಿಗದಿಪಡಿಸಬೇಕು. ನಗರದಲ್ಲಿ ಪಾದಚಾರಿ ಮಾರ್ಗ ಅತಿಕ್ರಮಣ ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು.
ಸೇನೆಯ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸಂಜು ಯಾದವ್, ಸಹ ಕಾರ್ಯದರ್ಶಿ ಮಹಾರುದ್ರ ಅಮದಲಪಾಡೆ, ಪ್ರಧಾನ ಸಂಚಾಲಕ ಸುಧಾಕರ ರಾಠೋಡ್, ನಗರ ಘಟಕದ ಅಧ್ಯಕ್ಷ ಸಂತೋಷ ಪಾಟೀಲ, ಬೀದರ್ ಉತ್ತರ ಘಟಕದ ಅಧ್ಯಕ್ಷ ಅನಿಲ್ ರಾಜಗೀರಾ, ಬೀದರ್ ದಕ್ಷಿಣ ಘಟಕದ ಅಧ್ಯಕ್ಷ ಅನಿಲ್ ರೆಡ್ಡಿ, ಆದಿತ್ಯ ರೆಡ್ಡಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net