ವಿರೋಧ ಪಕ್ಷಗಳ ನಡೆಗೆ ಘೋಡೆ ತೀವ್ರ ಖಂಡನೆ

ಜಾನಸನ್ ಘೋಡೆ
ಜಾನಸನ್ ಘೋಡೆ
Published on

ಬೀದರ್: ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ವಿಧಾನಮಂಡಲ ಕಲಾಪಕ್ಕೆ ಅಡ್ಡಿ ಉಂಟು ಮಾಡುತ್ತಿರುವ ವಿರೋಧ ಪಕ್ಷಗಳ ನಡೆಯನ್ನು ಕಾಂಗ್ರೆಸ್ ಕಿಸಾನ್ ವಿಭಾಗದ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಜಾನಸನ್ ಘೋಡೆ ತೀವ್ರವಾಗಿ ಖಂಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ಜನಕಲ್ಯಾಣ ಕಾರ್ಯಕ್ರಮಗಳಿಂದ ರಾಜ್ಯದ ಜನ ಸಂತೃಪ್ತರಾಗಿದ್ದಾರೆ. ವಿರೋಧ ಪಕ್ಷಗಳ ಬಳಿ ಸರ್ಕಾರದ ಬಗ್ಗೆ ಮಾತನಾಡಲು ಯಾವುದೇ ವಿಷಯವಿಲ್ಲ. ಹೀಗಾಗಿ ಜನರ ದಿಕ್ಕು ತಪ್ಪಿಸಲು ಬಿಜೆಪಿ ಹಾಗೂ ಜೆಡಿಎಸ್ ಅನಗತ್ಯವಾಗಿ ಬಿ. ನಾಗೇಂದ್ರ ಅವರ ರಾಜಿನಾಮೆಗೆ ಬೇಡಿಕೆ ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿವೆ ಎಂದು ಟೀಕಿಸಿದ್ದಾರೆ.
ಮಳೆ ಕೊರತೆಯಿಂದಾಗಿ ರಾಜ್ಯದಾದ್ಯಂತ ಬರ ಪರಿಸ್ಥಿತಿ ಉಂಟಾಗಿದೆ. ಈ ಬಾರಿಯ ಅಧಿವೇಶನ ಅನ್ನದಾತರ ವೇದನೆ ಕುರಿತ ಚರ್ಚೆಗೆ ವೇದಿಕೆಯಾಗಬೇಕಿತ್ತು. ಆದರೆ, ವಿರೋಧ ಪಕ್ಷಗಳು ಇದಕ್ಕೆ ಅವಕಾಶ ಕೊಡುತ್ತಿಲ್ಲ ಎಂದು ಆರೋಪಿಸಿದ್ದಾರೆ.
ವಿರೋಧ ಪಕ್ಷಗಳು ಕಲಾಪ ಸುಸೂತ್ರವಾಗಿ ನಡೆಯಲು ಅವಕಾಶ ಕೊಡಬೇಕು. ವಿರೋಧಿಸುವುದಕ್ಕಾಗಿಯೇ ವಿರೋಧ ಮಾಡುವುದನ್ನು ಬಿಟ್ಟು ಜನ ಹಿತದಿಂದ ಕಾರ್ಯನಿರ್ವಹಿಸಬೇಕು.ರಾಜ್ಯದ ರೈತರ ನೆರವಿಗೆ ಧಾವಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net