ನಾಗರಿಕರು ಹಕ್ಕು, ಕರ್ತವ್ಯ ಅರಿಯಲಿ

ಕಮಲನಗರ ತಾಲ್ಲೂಕಿನ ಠಾಣಾಕುಶನೂರದ ಶ್ರೀ ಮಾಣಿಕರಾವ್ ಪಾಟೀಲ ರೂರಲ್ ಪಾಲಿಟೆಕ್ನಿಕ್‍ನಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಯಿತು.
ಕಮಲನಗರ ತಾಲ್ಲೂಕಿನ ಠಾಣಾಕುಶನೂರದ ಶ್ರೀ ಮಾಣಿಕರಾವ್ ಪಾಟೀಲ ರೂರಲ್ ಪಾಲಿಟೆಕ್ನಿಕ್‍ನಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಯಿತು.
Published on

ಬೀದರ್: ದೇಶದ ಪ್ರತಿ ಪ್ರಜೆಯೂ ತಮ್ಮ ಹಕ್ಕು ಹಾಗೂ ಕರ್ತವ್ಯಗಳನ್ನು ಅರಿಯಬೇಕು ಎಂದು ಔರಾದ್ ಸಿವಿಲ್ ಹಾಗೂ ಜೆಎಂಎಫ್‍ಸಿ ನ್ಯಾಯಾಧೀಶ ವಿನಾಯಕ ವಾನಖಂಡೆ ಹೇಳಿದರು.
ಕಮಲನಗರ ತಾಲ್ಲೂಕಿನ ಠಾಣಾಕುಶನೂರದ ಶ್ರೀ ಮಾಣಿಕರಾವ್ ಪಾಟೀಲ ರೂರಲ್ ಪಾಲಿಟೆಕ್ನಿಕ್‍ನಲ್ಲಿ ಸೋಮವಾರ ಆಯೋಜಿಸಿದ್ದ ರಾಷ್ಟ್ರೀಯ ಯುವ ದಿನಾಚರಣೆ ಹಾಗೂ ಕಾನೂನು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಂವಿಧಾನದಲ್ಲಿ ಪ್ರಜೆಗಳಿಗೆ ಹಕ್ಕುಗಳನ್ನು ಕೊಡಲಾಗಿದೆ. ಅದರ ಜತೆ ಎಲ್ಲರೂ ತಮ್ಮ ಕರ್ತವ್ಯಗಳನ್ನು ಕೂಡ ನಿರ್ವಹಿಸಬೇಕಾಗುತ್ತದೆ ಎಂದು ತಿಳಿಸಿದರು.
ನೆಲದ ಕಾನೂನನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಎಂದರು.
ಸಮೃದ್ಧ ಹಾಗೂ ಸದೃಢ ರಾಷ್ಟ್ರ ಕಟ್ಟುವ ಜವಾಬ್ದಾರಿ ಯುವ ಜನರ ಮೇಲಿದೆ ಎಂದು ಔರಾದ್ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಬಾಲಾಜಿ ಕಂಬಾರ ಹಾಗೂ ವಕೀಲ ಸುಧೀರ್ ಮಡಿವಾಳ ಹೇಳಿದರು.
ವಿದ್ಯಾರ್ಥಿಗಳು ಕಠಿಣ ಪರಿಶ್ರಮದ ಮೂಲಕ ಉಜ್ವಲ ಭವಿಷ್ಯ ಕಟ್ಟಿಕೊಳ್ಳಬೇಕು. ಸಮಾಜ ಹಾಗೂ ದೇಶಕ್ಕೂ ಕೊಡುಗೆ ನೀಡಬೇಕು ಎಂದು ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ರಾಜಶೇಖರ ಮುದ್ದಾ ಸಲಹೆ ಮಾಡಿದರು.
ಠಾಣಾಕುಶನೂರು ಪಿಎಸ್‍ಐ ಶೇಕ್ ಶಾ ಪಟೇಲ್ ಮಾತನಾಡಿದರು. ನಿಯೋಜನೆ ಅಧಿಕಾರಿ ಸುನೀಲಕುಮಾರ ಮಡಿವಾಳ, ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿ ಸಂಗಮೇಶ ಆಣದೂರೆ, ಭಾವರಾವ್ ರಾಠೋಡ್, ಜಯಶ್ರೀ ಜೀರ್ಗೆ, ವಿಶ್ವನಾಥ ಶಾಸ್ತ್ರಿ, ಜಯೇಂದ್ರ ಪಡಸಾಲೆ ಮತ್ತಿತರರು ಇದ್ದರು.
ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್ ವಿಭಾಗದ ಮುಖ್ಯಸ್ಥ ರೇವಣಪ್ಪ ವಾಕಡೆ ಸ್ವಾಗತಿಸಿದರು. ಸಂಜಯ್ ಭೋಸ್ಲೆ ವಂದಿಸಿದರು.
ಔರಾದ್ ತಾಲ್ಲೂಕು ವಕೀಲರ ಸಂಘ, ಪೊಲೀಸ್ ಇಲಾಖೆ ಹಾಗೂ ಶ್ರೀ ಮಾಣಿಕರಾವ್ ಪಾಟೀಲ ರೂರಲ್ ಪಾಲಿಟೆಕ್ನಿಕ್ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net