ಬೀದರ್: ನಗರದ ಲಾವಣ್ಯ ಕನ್ವೆನ್ಷನ್ ಹಾಲ್ನಲ್ಲಿ ಜು.28ರಂದು ಬೆಳಗ್ಗೆ 11:30 ಕ್ಕೆ ಜಿಲ್ಲಾಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಹಮ್ಮಿಕೊಳ್ಳಲಾಗಿದೆ.
ಎಐಸಿಸಿ ವೀಕ್ಷಕ ರಾಜೇಶ್ ಲಲ್ಲೂತಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ತಿಳಿಸಿದ್ದಾರೆ.
ಜಿಲ್ಲೆಯ ಸಚಿವರು, ಮಾಜಿ ಸಚಿವರು, ಸಂಸದರು, ಮಾಜಿ ಸಂಸದರು, ಶಾಸಕರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸದಸ್ಯರು, ಕೆಪಿಸಿಸಿ ಪದಾಧಿಕಾರಿಗಳು, ಕಾಂಗ್ರೆಸ್ ಜಿಲ್ಲಾ ಘಟಕದ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು, ಮುಂಚೂಣಿ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರು, ಮಾಜಿ ಉಪಾಧ್ಯಕ್ಷರು, ಮಾಜಿ ಸದಸ್ಯರು, ಮಹಾನಗರ ಪಾಲಿಕೆಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ರಾಜ್ಯ ಸರ್ಕಾರದಿಂದ ನಾಮ ನಿರ್ದೇಶನಗೊಂಡ ಸದಸ್ಯರು, ಪಕ್ಷದ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಕೋರಿದ್ದಾರೆ.