ಮಜ್ದೂರ್ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾಗಿ ತುಕಾರಾಮ ಚಿಮಕೋಡೆ

ತುಕಾರಾಮ ಚಿಮಕೋಡೆ
ತುಕಾರಾಮ ಚಿಮಕೋಡೆ
Published on
ಬೀದರ್: ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ತುಕಾರಾಮ ಚಿಮಕೋಡೆ ಅವರನ್ನು ನೇಮಕ ಮಾಡಲಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಈಶ್ವರ ಖಂಡ್ರೆ ಅವರ ಶಿಫಾರಸಿನ ಮೇರೆಗೆ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಡಿ. ಲಕ್ಷ್ಮಿ ವೆಂಕಟೇಶ್ವರ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಚಿಮಕೋಡೆ ಅವರು ಎರಡು ದಶಕದಿಂದ ಕಾಂಗ್ರೆಸ್ ಪಕ್ಷದಲ್ಲಿ ಇದ್ದಾರೆ. ಪಕ್ಷ ವಹಿಸಿದ ವಿವಿಧ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಾ ಬಂದಿದ್ದಾರೆ. ಅದರ ಫಲವಾಗಿ ಇದೀಗ ಅವರಿಗೆ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನ ಒಲಿದು ಬಂದಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net