ಮತದಾನ ಕೇಂದ್ರದ ಸಿದ್ಧತೆ ಪರಿಶೀಲಿಸಿದ ಡಿಸಿ

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ನಿಮಿತ್ತ ಚಿಟಗುಪ್ಪ ತಾಲೂಕಿನ ಮನ್ನಾಎಖೇಳ್ಳಿ ಗ್ರಾಪಂ ಕಚೇರಿಯಲ್ಲಿರುವ ಮತದಾನ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶಮಾರ್ ಭೇಟಿ ನೀಡಿ ಪರಿಶೀಲಿಸಿದರು. ತಹಸೀಲ್ದಾರ್​ ಮಂಜುನಾಥ ಪಂಚಾಳ, ಕಂದಾಯ ನಿರೀಕ್ಷಕ ಸಂಜೀವಕುಮಾರ ಕರೆನೋರ, ಪಿಎಸ್​ಐ ವಸೀಮ್​ ಪಟೇಲ್​ ಇತರರಿದ್ದರು.

Published on: 

ಚಿಟಗುಪ್ಪ: ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ಶುಕ್ರವಾರ ನಡೆಯಲಿರುವ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಮನ್ನಾಎಖೇಳ್ಳಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿರುವ ಮತದಾನ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶಮಾರ್ ಭೇಟಿ ನೀಡಿ ಪೂರ್ವಸಿದ್ಧತೆ ಪರಿಶೀಲಿಸಿದರು.

ಮತದಾನ ಪ್ರಕ್ರಿಯೆ ಸುಗಮವಾಗಿ ನಡೆಯಲು ಕೈಗೊಂಡಿರುವ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಮತದಾರರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದು, ಅಗತ್ಯ ವ್ಯವಸ್ಥೆಗಳನ್ನು ಸಮರ್ಪಕವಾಗಿ ಸಿದ್ಧಪಡಿಸುವುದು ಹಾಗೂ ಚುನಾವಣಾ ಕರ್ತವ್ಯಗಳನ್ನು ನಿರ್ವಹಿಸಲು ಬೇಕಾದ ಸಿದ್ಧತೆಗಳನ್ನು ಪೂರ್ಣಗೊಳಿಸುವಂತೆ ಸೂಚಿಸಿದರು.

ಚುನಾವಣಾ ಪ್ರಕ್ರಿಯೆ ಶಾಂತಿಯುತವಾಗಿ ಹಾಗೂ ಸುಸೂತ್ರವಾಗಿ ನಡೆಯಲು ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಮತದಾನ ಕೇಂದ್ರದಲ್ಲಿ ಅಗತ್ಯ ಸೌಲಭ್ಯಗಳನ್ನು ಸಕಾಲದಲ್ಲಿ ಪೂರ್ಣಗೊಳಿಸಿ, ಚುನಾವಣಾ ಕರ್ತವ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

ತಹಸೀಲ್ದಾರ್​ ಮಂಜುನಾಥ ಪಂಚಾಳ, ಕಂದಾಯ ನಿರೀಕ್ಷಕ ಸಂಜೀವಕುಮಾರ ಕರೆನೋರ, ಪಿಎಸ್​ಐ ವಸೀಮ್​ ಪಟೇಲ್​ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net