ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

ಜಾನಸನ್ ಘೋಡೆ ಮನವಿಗೆ ಸರ್ಕಾರ ಸ್ಪಂದನೆ
bidar
ಜಾನಸನ್ ಘೋಡೆ
Published on: 

ಬೀದರ್: ಔರಾದ್ ತಾಲ್ಲೂಕಿನಲ್ಲಿ ಒಂದು ತಿಂಗಳಿಂದ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕು ಎನ್ನುವ ಕಾಂಗ್ರೆಸ್ ಕಿಸಾನ್ ವಿಭಾಗದ ರಾಷ್ಟ್ರೀಯ ಜಂಟಿ ಸಂಯೋಜಕ ಜಾನಸನ್ ಘೋಡೆ ಅವರ ಮನವಿಗೆ ರಾಜ್ಯ ಸರ್ಕಾರ ಸ್ಪಂದಿಸಿದೆ.ಬೆಂಗಳೂರಿನಲ್ಲಿ ಶುಕ್ರವಾರ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಲ್ಲಿಸಿದ ಮನವಿ ಪತ್ರದ ಹಿನ್ನೆಲೆಯಲ್ಲಿ ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರ ಉಪ ಕಾರ್ಯದರ್ಶಿ(ಆಡಳಿತ) ಸಿ. ಮಂಜೂರ್ ಅವರು ಬೀದರ್ ಜಿಲ್ಲಾಧಿಕಾರಿ ಅವರಿಗೆ ಸೂಚನೆ ನೀಡಿದ್ದಾರೆ.ಔರಾದ್ ತಾಲ್ಲೂಕಿನ ಜನರು ಪ್ರತಿ ದಿನ ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಘೋಡೆ ಅವರು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.ಔರಾದ್ ಪಟ್ಟಣ ಹಾಗೂ ತಾಲ್ಲೂಕಿನ ಎಲ್ಲ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಶೀಲಿಸಬೇಕು. ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಬೇಕು. ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು. ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.