ಗಣೇಶ ಪಾಟೀಲಗೆ ರಾಜ್ಯೋತ್ಸವ ಪ್ರಶಸ್ತಿ

ಬೀದರ್ ನಲ್ಲಿ ಪ್ರಶಸ್ತಿ ಪ್ರದಾನ
bidar
ಗಣೇಶ ಪಾಟೀಲ
Published on: 

ಬೀದರ್: ಇಲ್ಲಿಯ ನೆಹರೂ ಕ್ರೀಡಾಂಗಣದಲ್ಲಿ ಜಿಲ್ಲಾ ಆಡಳಿತ ವತಿಯಿಂದ ಭಾನುವಾರ ನಡೆದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ನಮ್ಮ ಕರ್ನಾಟಕ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಪಾಟೀಲ ಅವರಿಗೆ ಜಿಲ್ಲಾಮಟ್ಟದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಶಾಲು ಹೊದಿಸಿ, ಫಲ ಪುಷ್ಪ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು.
ಭಾಲ್ಕಿ ತಾಲ್ಲೂಕಿನ ಜ್ಯಾಂತಿ ಗ್ರಾಮದ  ಗಣೇಶ ಪಾಟೀಲ ಜಿಲ್ಲೆಯ ಮುಂಚೂಣಿ ಹೋರಾಟಗಾರರಲ್ಲಿ ಒಬ್ಬರಾಗಿದ್ದಾರೆ. ಎರಡು ದಶಕಗಳಿಂದ ಕನ್ನಡ ಪರ ಧ್ವನಿ ಎತ್ತುತ್ತ ಬಂದಿದ್ದಾರೆ. ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ.
ಗಣೇಶ ಪಾಟೀಲ ಅವರಿಗೆ ಜಿಲ್ಲಾಮಟ್ಟದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ದೊರೆತಿದ್ದಕ್ಕೆ ಅನೇಕರು ಸಂತಸ ವ್ಯಕ್ತಪಡಿಸಿ, ಅಭಿನಂದನೆ ತಿಳಿಸಿದ್ದಾರೆ.