ಶರಣ ವಿಜಯೋತ್ಸವ ನಾಡಹಬ್ಬ ಅ.11ರಿಂದ

ಬಸವಕಲ್ಯಾಣದ ಹರಳಯ್ಯನವರ ಗವಿಯಲ್ಲಿ ಭಾನುವಾರ ಸಂಜೆ ಕರೆದಿದ್ದ ಶರಣು ಶರಣಾರ್ಥಿ ಸಮಾವೇಶ ಹಾಗೂ ಶರಣ ವಿಜಯೋತ್ಸವ ನಾಡಹಬ್ಬ ಹುತಾತ್ಮ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಪೂಜ್ಯ ಡಾ.ಗಂಗಾಬಿಕಾ ಅಕ್ಕ ಮಾತನಾಡಿದರು. ಶ್ರೀ ಶಿವಾನಂದ ಸ್ವಾಮೀಜಿ ಇತರರಿದ್ದರು.
ಬಸವಕಲ್ಯಾಣದ ಹರಳಯ್ಯನವರ ಗವಿಯಲ್ಲಿ ಭಾನುವಾರ ಸಂಜೆ ಕರೆದಿದ್ದ ಶರಣು ಶರಣಾರ್ಥಿ ಸಮಾವೇಶ ಹಾಗೂ ಶರಣ ವಿಜಯೋತ್ಸವ ನಾಡಹಬ್ಬ ಹುತಾತ್ಮ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಪೂಜ್ಯ ಡಾ.ಗಂಗಾಬಿಕಾ ಅಕ್ಕ ಮಾತನಾಡಿದರು. ಶ್ರೀ ಶಿವಾನಂದ ಸ್ವಾಮೀಜಿ ಇತರರಿದ್ದರು.
Published on: 

ಬಸವಕಲ್ಯಾಣ: ಸಮಾನತೆ, ಮಾನವೀಯ ಮೌಲ್ಯಗಳಿಗಾಗಿ ಹುತಾತ್ಮರಾದ ಶರಣರ ಸ್ಮರಣೆಗಾಗಿ ನಗರದ ಹರಳಯ್ಯನವರ ಗವಿಯಲ್ಲಿ ಅ.11ರಿಂದ 21ರವರೆಗೆ ಶರಣ ವಿಜಯೋತ್ಸವ ನಾಡಹಬ್ಬ ಹುತಾತ್ಮ ದಿನಾಚರಣೆ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಪೂಜ್ಯ ಡಾ.ಗಂಗಾಂಬಿಕಾ ಅಕ್ಕ ಹೇಳಿದರು.

ನಗರದ ಹರಳಯ್ಯನವರ ಗವಿಯಲ್ಲಿ ಭಾನುವಾರ ಸಂಜೆ ಕರೆದಿದ್ದ ಶರಣು ಶರಣಾರ್ಥಿ ಸಮಾವೇಶ ಹಾಗೂ ಶರಣ ವಿಜಯೋತ್ಸವ ನಾಡಹಬ್ಬ ಹುತಾತ್ಮ ದಿನಾಚರಣೆ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ವೀರ ಸೈನಿಕರ ಸಮಾವೇಶ, ಮಹಾಶಕ್ತಿ ಕೂಟಗಳ ಸಮಾವೇಶ, ಹಿರಿಯ ನಾಗರಿಕರ ಸಮಾವೇಶ, ರೈತರ ಸಮಾವೇಶ, ನಾಟಕ, ರೂಪಕಗಳು ಶರಣ ವಿಜಯ ಪ್ರಶಸ್ತಿ ಪ್ರದಾನ ಮತ್ತು ಸಾಂಸತಿಕ ಕಾರ್ಯಕ್ರಮ ನಡೆಸಲಾಗುವುದು ಎಂದು ತಿಳಿಸಿದರು.

ಅನುಭವ ಮಂಟಪದ ಸಂಚಾಲಕ ಶ್ರೀ ಶಿವಾನಂದ ಸ್ವಾಮೀಜಿ ಮಾತನಾಡಿ, ಈ ಕಾರ್ಯಕ್ರಮಕ್ಕೆ ಹೆಚ್ಚಿನ ರೀತಿಯಲ್ಲಿ ಪ್ರಚಾರ ಮಾಡಿ ಯಶಸ್ವಿಗೊಳಿಸಬೇಕು ಎಂದರು.

ನಿವೃತ್ತ ಪ್ರಾಚಾರ್ಯ ಶಂಕರ ಕರಣೆ ಮಾತನಾಡಿ, ಕಾರ್ಯಕ್ರಮಕ್ಕೆ ಎಲ್ಲರೂ ತನು ಮನ ಧನದಿಂದ ಸಹಕರಿಸಬೇಕು ಎಂದು ಮನವಿ ಮಾಡಿದರು.

ತಾಲೂಕು ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಗುರುನಾಥ ಗಡ್ಡೆ, ಹಿರಿಯ ನಾಗರಿಕರ ಒಕ್ಕೂಟದ ಅಧ್ಯಕ್ಷ ಚನ್ನಪ್ಪ ಪ್ರತಾಪುರೆ, ರವೀಂದ್ರ ಕೊಳಕೂರ ಸಲಹೆ ನೀಡಿದರು. ಬಿಡಿಪಿಸಿ ಅಧ್ಯಕ್ಷ ಅನಿಲಕುಮಾರ ರಗಟೆ ಅಧ್ಯಕ್ಷತೆ ವಹಿಸಿದ್ದರು. ಹರಳಯ್ಯ ಸಮಾಜದ ಉಪಾಧ್ಯಕ್ಷ ಗೌತಮ ಜಾಧವ ಧ್ವಜಾರೋಹಣ ನೆರವೇರಿಸಿದರು. ಸತ್ಯಕ್ಕತಾಯಿ ಪ್ರಾಸ್ತಾವಿಕ ಮಾತನಾಡಿದರು. ಬಿಡಿಪಿಸಿ ಉಪಾಧ್ಯಕ್ಷ ಮಲ್ಲಿಕಾರ್ಜುನ ಕುರಕೋಟೆ, ಸಹ ಕಾರ್ಯದರ್ಶಿ ಬಸವರಾಜ ಬಾಲಿಕಿಲೆ, ನಿರ್ದೇಶಕರಾದ ವೀರಣ್ಣ ಹಲಶೆಟ್ಟಿ, ಬಸವರಾಜ ತೊಂಡಾರೆ, ಬಿಡಿವಿಸಿ ಕೋಶ್ಯಾಧ್ಯಕ್ಷ ಶಿವರಾಜ ಶಾಶೆಟ್ಟಿ, ರೇವಣಪ್ಪ ರಾಯವಾಡೆ, ಕದಳಿ ವೇದಿಕೆ ಅಧ್ಯಕ್ಷೆ ನಿರ್ಮಲಾ ಶಿವಣಕರ, ಬಸವತತ್ವ ಪ್ರಸಾರ ಕೇಂದ್ರದ ಅಧ್ಯಕ್ಷ ಜಯಪ್ರಕಾಶ ಸದಾನಂದೆ, ರೈತ ಸಂಘದ ಅಧ್ಯಕ್ಷ ಸುಭಾಷ ರಗಟೆ, ಲಿಂಗರಾಜ ಶಾಶೆಟ್ಟಿ ಇತರರಿದ್ದರು. ಸಂತೋಷ ಮಡಿವಾಳ ಸ್ವಾಗತಿಸಿದರು. ಜಯಶ್ರೀ ಬಿರಾದಾರ ನಿರೂಪಣೆ ಮಾಡಿದರು.

ಸಮಿತಿ ರಚನೆ: ಕಾರ್ಯಕ್ರಮದ ಯಶಸ್ವಿಗಾಗಿ ಸ್ವಾಗತ ಸಮಿತಿ, ಹಣಕಾಸು ಸಮಿತಿ, ಪ್ರಚಾರ ಸಮಿತಿ, ಮೆರವಣಿಗೆ ಸಮಿತಿ, ಪ್ರಸಾದ ಸಮಿತಿ, ಸಾಂಸತಿಕ ಕಾರ್ಯಕ್ರಮಗಳ ಸಮಿತಿ, ಇಷ್ಟಲಿಂಗಪೂಜಾ ಯೋಗ ಸಮಿತಿ, ವೇದಿಕೆ ಸಮಿತಿ, ಯುವಗೋಷ್ಠಿ ಸಮಿತಿ, ಮಹಿಳಾ ಸಮಿತಿಗಳನ್ನು ರಚಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net