

ಬೈಲಹೊಂಗಲ: ಪಟ್ಟಣದ ಕೆಎಲ್ಇ ಸಂಸ್ಥೆಯ ಪಾಲಿಟೆಕ್ನಿಕ್ (ಡಿಪ್ಲೋಮಾ) ಕಾಲೇಜಿನಲ್ಲಿ ಮಾ.19ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆ ವರೆಗೆ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಮೇಳದಲ್ಲಿ 25ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿ ಭಾಗವಹಿಸಲಿವೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಬಿಇ ಸೇರಿ ಪದವಿ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ಅಗತ್ಯ ದಾಖಲೆಗಳೊಂದಿಗೆ ಹಾಜರಾಗಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಾಚಾರ್ಯ ಶ್ರೀಧರ ನಿರಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾಹಿತಿಗಾಗಿ ಮೊ.ನಂ. 8861883841, 9844381935 ಸಂಪರ್ಕಿಸಿ.