ನಿರುದ್ಯೋಗಿಗಳಿಗೆ ಸಿಹಿಸುದ್ದಿ: ಬೆಂಗಳೂರಿನಲ್ಲಿ ಇದೇ 15ರಂದು ನಡೆಯಲಿದೆ ಬೃಹತ್​ ಉದ್ಯೋಗ ಮೇಳ

job fair
Published on

ಬೆಂಗಳೂರು: ರಾಜ್ಯದಲ್ಲಿರುವ ನಿರುದ್ಯೋಗಿಗಳಿಗೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ಖಾತೆ ಸಚಿವ ಸದಾನಂದ ಗೌಡ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಉದ್ಯೋಗಾವಕಾಶ ಹೆಚ್ಚಿಸುವ ನಿಟ್ಟಿನಲ್ಲಿ ಬೃಹತ್​ ಉದ್ಯೋಗ ಮೇಳ ನಡೆಸುವುದಾಗಿ ಸಚಿವರು ತಿಳಿಸಿದ್ದಾರೆ.

ಇದೇ ತಿಂಗಳ 15ನೇ ತಾರೀಕಿನಂದು ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಬೆಂಗಳೂರಿನ ಎಸ್​.ಜಿ ಇಂಟರ್​ನ್ಯಾಷನಲ್​ ಸ್ಕೂಲ್​ ಆವರಣದಲ್ಲಿ ಬೃಹತ್​ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಇದರಲ್ಲಿ ಪಾಲ್ಗೊಳ್ಳಲು ಬಯಸುವವರು http://bangaloreudyogamela.in ವೆಬ್​ಸೈಟ್​ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಅಥವಾ 0806197858 ನಂಬರಿಗೆ ಮಿಸ್​ ಕಾಲ್​ ಕೊಡುವ ಮೂಲಕ ನೋಂದಾಯಿಸಿಕೊಳ್ಳಬಹುದು ಎಂದು ಸಚಿವರು ತಿಳಿಸಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net