

ಹೊಳಲ್ಕೆರೆ: ಗಣೇಶೋತ್ಸವ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್-ಬಜರಂಗದಳ ನೇತೃತ್ವದಲ್ಲಿ ಪಟ್ಟಣದಲ್ಲಿ ಸೆ.30ರ ಬೆಳಗ್ಗೆ 11ಕ್ಕೆ ಬೃಹತ್ ಶೋಭಾ ಯಾತ್ರೆ ಹಮ್ಮಿಕೊಳ್ಳಲಾಗಿದೆ.
ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ವಿಎಚ್‌ಪಿ ದಕ್ಷಿಣ ಪ್ರಾಂತ ಕಾರ್ಯದರ್ಶಿ ಜಗನ್ನಾಥ ಶಾಸ್ತ್ರೀ ಉದ್ಘಾಟಿಸಲಿದ್ದಾರೆ. ಶಾಸಕ ಡಾ.ಎಂ.ಚಂದ್ರಪ್ಪ ಇತರರು ಪಾಲ್ಗೊಳ್ಳಲಿದ್ದಾರೆ.
ಡಿಜೆ, ಕೇರಳದ ಚಂಡೇಮೇಳ, ಮಹಾರಾಷ್ಟ್ರದ ನಾಸಿಕ್ ಡೋಲ್, ವೀರಗಾಸೆ, ವಿವಿಧ ಕಲಾತಂಡಗಳು ಮೆರವಣಿಗೆಯಲ್ಲಿ ಸಾಗಲಿವೆ ಎಂದು ಸಮಿತಿ ಅಧ್ಯಕ್ಷ ಕೆ.ವಿ.ಧ್ರುವಕುಮಾರ್ ತಿಳಿಸಿದ್ದಾರೆ.