ಜಿಲ್ಲಾ ಕ್ರೀಡಾಂಗಣದಲ್ಲಿ ವಿಶ್ವಕಪ್ ಫೈನಲ್ ವಿಕ್ಷಣೆಗೆ ದೊಡ್ಡ ಸ್ಕ್ರೀನ್

world cup india web
Published on

ರಾಮನಗರ : ವಿಶ್ವಕಪ್-2023ರ ಫೈನಲ್ ಪಂದ್ಯಾವಳಿ ಉಚಿತ ನೇರ ಪ್ರಸಾರದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಅನಿತಾ ಅವರು ತಿಳಿಸಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ಮಧ್ಯ ನಡೆಯುವ ವಿಶ್ವಕಪ್-2023ರ ಫೈನಲ್ ಪಂದ್ಯಾವಳಿಯ 2023ರ ನವೆಂಬರ್ 19ರ ಭಾನುವಾರ ರಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿದ್ದು, ಸದರಿ ಪಂದ್ಯಾವಳಿಯ ಉಚಿತ ನೇರ ಪ್ರಸಾರವನ್ನು ಉತ್ತಮವಾದ ಎಲ್.ಇ.ಡಿ ಪರದೆ ಮತ್ತು ಸೌಂಡ್ ಸಿಸ್ಟಂನೊಂದಿಗೆ ರಾಮನಗರ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.

ಕ್ರಿಕೆಟ್ ಪಂದ್ಯಾವಳಿಯ ವಿಕ್ಷಣೆಗೆ ಕ್ರೀಡಾಪಟುಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net