

ಬಂಟ್ವಾಳ: ರಾಮಲ್‌ಕಟ್ಟೆಯಲ್ಲಿ ಬೈಕ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಸವಾರ ಬಂಟ್ವಾಳ ಹೊಸ್ಮಾರು ನಿವಾಸಿ ಧನುಷ್(23) ಎಂಬುವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಂಗಳೂರು ಕಡೆಯಿಂದ ಬಂಟ್ವಾಳ ಹೊಸ್ಮಾರು ಮನೆಗೆ ಬರುವ ಸಂಜೆ ವೇಳೆ ತುಂಬೆ ಸಮೀಪ ರಾಮಲ್‌ಕಟ್ಟೆ ತಿರುವಿನಲ್ಲಿ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.