

ಹಾವೇರಿ: ಸವಾರನ ನಿಯಂತ್ರಣ ತಪ್ಪಿ ಬೈಕ್‌ವೊಂದು ತುಂಗಾ ಮೇಲ್ದಂಡೆ ಯೋಜನೆ ಕಾಲುವೆಗೆ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು, ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ತಾಲೂಕಿನ ನೆಗಳೂರ ಗ್ರಾಮದ ಮರೋಳ ರಸ್ತೆಯಲ್ಲಿ ನಡೆದಿದೆ.
ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಬಾಳೆಹೊಸೂರ ಗ್ರಾಮದ ದಿಂಗಾಲೇಶ ಬಸಪ್ಪ ಅಣ್ಣಿಗೇರಿ(30) ಮೃತ ದುರ್ದೈವಿ. ಕುಮಾರ ನಾವಿ(24) ಎಂಬುವನು ಗಾಯಗೊಂಡಿದ್ದು, ಗುತ್ತಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇಬ್ಬರೂ ಗುತ್ತಲ ಕಡೆಯಿಂದ ಬಾಳೇಹೊಸೂರ ಗ್ರಾಮದ ಕಡೆಗೆ ಹೊರಟ್ಟಿದ್ದ ಸಮಯದಲ್ಲಿ ನೆಗಳೂರ ಗ್ರಾಮದ ಮರೋಳ ರಸ್ತೆಯಲ್ಲಿ ಸಂಚರಿಸುವಾಗ ಅತಿ ವೇಗವಾಗಿ ಚಲಾಯಿಸುತ್ತಿದ್ದ ಬೈಕ್ ಸವಾರನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಯು.ಟಿ.ಪಿ ಕಾಲುವೆಗೆ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.